ಹುಬ್ಬಳ್ಳಿ: ‘ಎರಡು ವರ್ಷದಿಂದ ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ನಡೆದಿಲ್ಲ. ಏನನ್ನೂ ಸಾಧನೆ ಮಾಡದ ರಾಜ್ಯ ಸರ್ಕಾರವು ಹೊಸಪೇಟೆಯಲ್ಲಿ ಯಾಕೆ ಸಾಧನಾ ಸಮಾವೇಶ ಆಯೋಜಿಸುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಪ್ರಶ್ನಿಸಿದರು.

‘ರಾಜ್ಯ ಸರ್ಕಾರವು ಈಗಾಗಲೇ ಜನರ ವಿಶ್ವಾಸ ಕಳೆದುಕೊಂಡಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಗುತ್ತಿಗೆದಾರರ ಬಿಲ್ ಬಾಕಿಯಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಸಿಗುತ್ತಿಲ್ಲವೆಂದು ಸ್ವತಃ ಕಾಂಗ್ರೆಸ್ ಶಾಸಕರೇ ಅಳಲು ತೋಡಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕಾಗಿ ಮಾಡುತ್ತಿದ್ದಾರೆ’ ಎಂದು ಅವರು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.