ಬೆಂಗಳೂರು: ಬಿಬಿಎಂಪಿ ಕೋವಿಡ್ ವಾರ್ ರೂಮ್ನಲ್ಲಿದ್ದ ಮುಸ್ಲಿಂ ಧರ್ಮೀಯ ಸಿಬ್ಬಂದಿ ಮೇಲೆ ಸುಳ್ಳು ಆರೋಪ ಹೊರಿಸಿ ಮತೀಯ ಸಂಘರ್ಷ ಸೃಷ್ಟಿಸಲು ಯತ್ನಿಸಿದ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕರಾದ ಸತೀಶ್ ರೆಡ್ಡಿ, ಎಲ್.ಎ.ರವಿ ಸುಬ್ರಮಣ್ಯ ಮತ್ತು ಉದಯ ಗರುಡಾಚಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ನಗರ ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದಾರೆ.

ರಾಜ್ಯಸಭಾ ಸದಸ್ಯ ಡಾ.ನಾಸೀರ್ ಹುಸೇನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಶಾಸಕರಾದ ಕೃಷ್ಣ ಬೈರೇಗೌಡ, ಜಮೀರ್ ಅಹಮ್ಮದ್ ಖಾನ್, ಎನ್.ಎ. ಹ್ಯಾರಿಸ್, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಮತ್ತು ಎಐಸಿಸಿ ವಕ್ತಾರ ಬೃಜೇಶ್ ಕಾಳಪ್ಪ ಅವರಿದ್ದ ನಿಯೋಗ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರನ್ನು ಶುಕ್ರವಾರ ಭೇಟಿಮಾಡಿ ದೂರು ಸಲ್ಲಿಸಿತು.

‘ಮೇ 4ರಂದು ಬೊಮ್ಮನಹಳ್ಳಿ ವಲಯದ ಕೋವಿಡ್ ವಾರ್ ರೂಮ್ಗೆ ಭೇಟಿ ನೀಡಿದ್ದ ತೇಜಸ್ವಿ ಸೂರ್ಯ ಮತ್ತು ಶಾಸಕರು, 16 ಮಂದಿ ಮುಸ್ಲಿಂ ಧರ್ಮೀಯ ಸಿಬ್ಬಂದಿ ಹೆಸರನ್ನು ದುರುದ್ದೇಶದಿಂದ ಉಲ್ಲೇಖಿಸಿದ್ದಾರೆ. ಅವರನ್ನು ಸೇರಿಸಿಕೊಂಡು ಮದರಸಾ ನಡೆಸುತ್ತಿದ್ದೀರಾ? ಎಂದು ಪ್ರಶ್ನಿಸುವ ಮೂಲಕ ಧರ್ಮದ ಆಧಾರದಲ್ಲಿ ದ್ವೇಷ ಬಿತ್ತಲು ಯತ್ನಿಸಿದ್ದಾರೆ’ ಎಂದು ದೂರಲಾಗಿದೆ.

ಸಂಸದ ಮತ್ತು ಶಾಸಕರ ಹೇಳಿಕೆ ಆಧರಿಸಿ ಮುಸ್ಲಿಂ ಧರ್ಮೀಯರ ವಿರುದ್ಧ ದ್ವೇಷದ ಸಂದೇಶಗಳನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಕೋಮು ಸೌಹಾರ್ದ ಕೆಡಿಸುವುದು ಮತ್ತು ನಗರದಲ್ಲಿ ಶಾಂತಿ ಕದಡುವ ಉದ್ದೇಶದಿಂದ ನಾಲ್ವರೂ ಈ ಕೃತ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇವರ ವಿರುದ್ಧ ಧರ್ಮದ ಆಧಾರದಲ್ಲಿ ದ್ವೇಷ ಬಿತ್ತಲು ಯತ್ನ, ಮತೀಯ ವಿಚಾರಗಳನ್ನು ಬಳಸಿ ಶಾಂತಿ ಕದಡಲು ಯತ್ನ, ಒಳಸಂಚು ನಡೆಸಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ನಿಯೋಗ ಆಗ್ರಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.