‘ಚುನಾವಣೆ ನಡೆದರೆ ಬಿಜೆಪಿಗೆ 140 ಸ್ಥಾನ’
‘ರಾಜ್ಯದಲ್ಲಿ ಈಗಲೇ ಚುನಾವಣೆ ನಡೆದರೆ ಬಿಜೆಪಿ 130–140 ಸ್ಥಾನಗಳಲ್ಲಿ ಗೆಲ್ಲಲಿದೆ. ಬಿಜೆಪಿಯೇ ಸರ್ಕಾರ ರಚಿಸಲಿದೆ’ ಎಂದು ವಿಜಯೇಂದ್ರ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು ‘ಪಟ್ಟಣ ಪಂಚಾಯತಿ ಚುನಾವಣೆ ಫಲಿತಾಂಶವೇ ಇದಕ್ಕೆ ಸಾಕ್ಷಿ. ಕಾಂಗ್ರೆಸ್ ಆಡಳಿತದಿಂದ ಬೇಸತ್ತಿರುವ ಜನರು ಬಿಜೆಪಿಗೆ ಮತ ನೀಡಿದ್ದಾರೆ’ ಎಂದಿದ್ದರು.