ಬೆಂಗಳೂರು: ಬಿಜೆಪಿ, ಆರ್‌ಎಸ್‌ಎಸ್ ಮತ್ತು ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿ, ಬಂಧಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಸಂಚು ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಆರೋಪಿಸಿದರು.

ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು ಬಿಜೆಪಿ ರಾಜ್ಯ ಘಟಕದ ಕಾನೂನು ಪ್ರಕೋಷ್ಠವು ಆರಂಭಿಸಿರುವ ಕಾನೂನು ಸಹಾಯವಾಣಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

'ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿತ್ತು. ನಮ್ಮ ಕಾರ್ಯಕರ್ತರು ಖಾಸಗಿ ಉದ್ಯೋಗಗಳನ್ನು ಕಳೆದುಕೊಳ್ಳುವಂತೆ ಮಾಡಲಾಗಿತ್ತು. ಸಾಮಾಜಿ ಮಾಧ್ಯಮಗಳಲ್ಲಿ ಮುಖ್ಯಮಂತ್ರಿಯನ್ನು ಟೀಕಿಸಿದ ಕಾರಣಕ್ಕೆ ಪೊಲೀಸ್ ಠಾಣೆಗಳಿಗೆ ಕರೆದೊಯ್ದು ಹಿಂಸಿಸಲಾಗಿತ್ತು. ಈ ಬಾರಿಯೂ ಅಂತಹ ಪ್ರಯತ್ನ ಮಾಡಲು ಕಾಂಗ್ರೆಸ್ ಸರ್ಕಾರದಲ್ಲಿ ಇರುವವರು ಸಿದ್ಧತೆ ಮಾಡುತ್ತಿದ್ದಾರೆ' ಎಂದು ದೂರಿದರು.

'ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿ, ನಮ್ಮ ಕಾರ್ಯಕರ್ತರನ್ನು ಬಂಧಿಸಲು ವೇದಿಕೆ ಸಿದ್ಧವಾಗುತ್ತಿದೆ. ಅದಕ್ಕೆ ಪೂರಕವಾಗಿ ಕೆಲವು ಸಚಿವರು ಮಾತನಾಡುತ್ತಿದ್ದಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಪರವಾಗಿ ಕೆಲಸ ಮಾಡುವವರನ್ನು ರೌಡಿ ಪಟ್ಟಿಗೆ ಸೇರಿಸಿ ತೊಂದರೆ ಕೊಡಲು ತಯಾರಿ ನಡೆದಿದೆ' ಎಂದರು.

ಪಕ್ಷ ಮತ್ತು ಸಂಘ ಪರಿವಾರದ ಕಾರ್ಯಕರ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೂಡಾಘಟ್ಟ ಮತ್ತು ಅವರ ಜತೆಗಿರುವ ನೂರಕ್ಕೂ ಹೆಚ್ಚು ವಕೀಲರು ಸೇರಿ ಸಹಾಯವಾಣಿ ಆರಂಭಿಸಿದ್ದಾರೆ. ಈ ಬಾರಿ ಪಕ್ಷ ಮತ್ತು ಸಂಘ ಪರಿವಾರದ ಕಾರ್ಯಕರ್ತರಿಗೆ ತೊಂದರೆ ನೀಡಲು ಬಿಡುವುದಿಲ್ಲ. ಬಿಜೆಪಿ ಹೋರಾಟದ ಮೂಲಕ ಬೆಳೆದ ಪಕ್ಷ. ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಹೋರಾಡುವುದು ಗೊತ್ತಿದೆ ಎಂದು ಹೇಳಿದರು.

ಯೋಗೇಂದ್ರ ಹೂಡಾಘಟ್ಟ ಮಾತನಾಡಿ, 'ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಮ್ಮ ಕಾರ್ಯಕರ್ರನ್ನು ಕಟ್ಟಿಹಾಕಲು ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಅದನ್ನು ಎದುರಿಸುವುದಕ್ಕಾಗಿ ಸಹಾಯವಾಣಿ ಆರಂಭಿಸಿದ್ದೇವೆ. ತೇಜಸ್ವಿ ಸೂರ್ಯ ಅವರ ಮಾರ್ಗದರ್ಶನದಲ್ಲಿ ಈ ಸಹಾಯವಾಣಿ ಕಾರ್ಯನಿರ್ವಹಿಸಲಿದೆ' ಎಂದರು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ವಸಂತಕುಮಾರ್, ಸಹಾಯವಾಣಿ ಸಂಯೋಜಕ ಸಂದೀಪ್ ರವಿ ಉಪಸ್ಥಿತರಿದ್ದರು.

ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು 18003091907 ಸಂಖ್ಯೆಯ ಸಹಾಯವಾಣಿ ಆರಂಭಿಸಲಾಗಿದೆ. ಕಾರ್ಯಕರ್ತರು ಕಾನೂನು ನೆರವು ಕೋರಿ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.