ಮುಖ್ಯಮಂತ್ರಿ ನಿವಾಸದಲ್ಲಿ ಸಚಿವರ ಜೊತೆ ಭಾನುವಾರ ಸಭೆ ನಡೆಸಿದ ಎಐಸಿಸಿ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ, ‘ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್, ಅಶ್ವತ್ಥನಾರಾಯಣ ವಿರುದ್ಧ ಗಂಭೀರ ಆರೋಪಗಳಿವೆ. ವಿಜಯೇಂದ್ರ, ಅಶೋಕ ವಿರುದ್ಧವೂ ಭ್ರಷ್ಟಾಚಾರದ ಆರೋಪಗಳಿವೆ. ಆರೋಪಗಳನ್ನು ಸಾಬೀತುಪಡಿಸುವಂತಹ ದಾಖಲೆಗಳಿದ್ದರೂ ಯಾರ ಮೇಲೂ ಕ್ರಮ ಆಗಿಲ್ಲ. ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಯಾಕೆ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿಲ್ಲ’ ಎಂದು ಖಾರವಾಗಿ ಕೇಳಿದ್ದಾರೆ ಎಂದು ಗೊತ್ತಾಗಿದೆ.