ಬೆಂಗಳೂರು:ಕಾಂಗ್ರೆಸ್ಸಿನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಎಂ.ವಿ. ರಾಜಶೇಖರನ್(92) ಸೋಮವಾರ ಬೆಳಗ್ಗೆ ನಿಧನರಾದರು.

ಬಹು ಅಂಗಾಗ ವೈಪಲ್ಯದಿಂದ ಬಳಲುತ್ತಿದ್ದರಾಜಶೇಖರನ್ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪುತ್ರ ತಿಳಿಸಿದ್ದಾರೆ.

ರಾಜಶೇಖರನ್, ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಅಳಿಯರಾಗಿದ್ದರು.ಸರಳತೆ, ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿ ಆಗಿದ್ದರು. ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು. ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆ ರಾಜ್ಯ ಸಚಿವರಾಗಿ ಹೊಣೆಗಾರಿಕೆ ನಿಭಾಯಿಸಿದ್ದರು.

ಗ್ರಾಮೀಣ ಆರ್ಥಿಕತೆಯ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಗ್ರಾಮೀಣ ಅಭಿವೃದ್ಧಿ ಕುರಿತು ಅಧ್ಯಯನ ಸಂಸ್ಥೆ ಸ್ಥಾಪಿಸಿದ್ದರು. ಮೌಲ್ಯಾಧಾರಿತ ರಾಜಕಾರಣದಿಂದ ಗುರುತಿಸಿಕೊಂಡಿದ್ದರು.

ಎಂ.ವಿ. ರಾಜಶೇಖರನ್ ಮೂಲತಃ ಕನಕಪುರ ತಾಲ್ಲೂಕಿನ ಮರಳವಾಡಿಯವರು.

ಬಿ.ಎ. ಪದವೀಧರರಾದ ರಾಜಶೇಖರನ್ ಕನಕಪುರದಲ್ಲಿ ಸ್ವಾತಂತ್ರ್ಯ ಹೋರಾಟದ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡವರು. ಯುವಕರಾಗಿದ್ದಾಗಲೇ ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿ ಹಲವು ಜವಾಬ್ದಾರಿ ನಿಭಾಯಿಸಿದ್ದ ಅವರು 1967ರಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾಗಿದ್ದರು. ಈ ಕ್ಷೇತ್ರದ ಮೊದಲ ಸಂಸದ ಎಂಬ ಹೆಗ್ಗಳಿಕೆ ಅವರದ್ದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.