ನವದೆಹಲಿ: ‘ನನ್ನ ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಅಧಿವೇಶನದ ಬಳಿಕ ಮತ್ತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂದು ಸುದ್ದಿಗಾರರು ಕೇಳಿದಾಗ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.

‘ನಿಮಗೆ ಅಭಯ ಸಿಕ್ಕಿದೆಯಂತೆ’ ಎಂಬ ಮರುಪ್ರಶ್ನೆಗೆ, ‘ನಿಮ್ಮ ಅರ್ಥ ಏನಿದೆಯೋ? ನನಗೆ ಯಾವ ಸಮಸ್ಯೆಯೂ ಇಲ್ಲ. ನೀವು (ಮಾಧ್ಯಮಗಳು) ಸಮಸ್ಯೆ ಸೃಷ್ಟಿಸುತ್ತಿದ್ದೀರಿ’ ಎಂದರು.

ವರಿಷ್ಠರ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ನಾಯಕರಿಗೆ ನನ್ನನ್ನು ನೋಡಿದ ತಕ್ಷಣ ಅರ್ಥವಾಗುತ್ತದೆ. ಕುಶಲೋಪರಿ ವಿಚಾರಿಸುತ್ತಾರೆ. ಇದು ಸೌಹಾರ್ದ ಭೇಟಿ. ವೈಯಕ್ತಿಕ ಭೇಟಿ ಅಲ್ಲ. ಇದರ ಹೊರತಾಗಿ ಬೇರೆ ವಿಚಾರಗಳನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಆಗುವುದಿಲ್ಲ. ಅದರ ಅಗತ್ಯ ಇಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.