ಕಾಂಗ್ರೆಸ್ ಬಹುಮತ ಪಡೆದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಸುದೀರ್ಘ ಅವಧಿ ನಿಭಾಯಿಸಿರುವ ಪರಮೇಶ್ವರ ಅವರೂ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ. ಅಲ್ಲದೆ, ಪರಿಶಿಷ್ಟ ಸಮುದಾಯಕ್ಕೆ ಸೇರಿದವರು ಮುಖ್ಯಮಂತ್ರಿ ಆಗಬೇಕೆಂಬ ಕೂಗು ಮೊದಲಿನಿಂದಲೇ ಕಾಂಗ್ರೆಸ್‌ನಲ್ಲಿ ಇದ್ದು, ಇತ್ತೀಚಿನ ವರ್ಷಗಳಲ್ಲಿ ಮತ್ತಷ್ಟು ಬಲಗೊಳ್ಳುತ್ತಿದೆ. ಹೀಗಾಗಿ, ಮುಂದಿನ ಚುನಾವಣೆಯ ವೇಳೆಗೆ ‘ಪರಿಶಿಷ್ಟ ಜಾತಿಯ ಮುಖ್ಯಮಂತ್ರಿ’ ವಿಚಾರ ಮತ್ತೊಮ್ಮೆ ಮುಂಚೂಣಿಗೆ ಬಂದರೂ ಅಚ್ಚರಿ ಇಲ್ಲ ಎಂಬ ಮಾತು ಕಾಂಗ್ರೆಸ್ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.