ಜಾಲಹಳ್ಳಿ (ರಾಯಚೂರು ಜಿಲ್ಲೆ): ‘ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಹೆಚ್ಚುವರಿ ಮೀಸಲಾತಿ ನೀಡುವುದಾಗಿ ಸುಳ್ಳು ಹೇಳಿ ರಾಜ್ಯ ಸರ್ಕಾರವು ದಾರಿ ತಪ್ಪಿಸುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯ ಕನಕ ಗುರುಪೀಠದಲ್ಲಿ ಗುರುವಾರ ಮೂರು ದಿನಗಳ ಹಾಲುಮತ ಸಂಸ್ಕೃತಿ ವೈಭವದ ‘ಹಾಲುಮತ ಕಲಾ ಪ್ರಕಾರಗಳು ಮತ್ತು ಕಲಾವಿದರ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.

‘ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದರೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕುರುಬರಿಗೆ ಮೀಸಲಾತಿ ಕೊಡಿಸದೇ ಡೋಂಗಿತನ ತೋರುತ್ತಿದ್ದಾರೆ’ ಎಂದು ಅವರು ಟೀಕಿಸಿದರು.

‘ಸಮಾಜದಲ್ಲಿ ಪ್ರತಿಯೊಬ್ಬರೂ ಅರ್ಥಿಕ, ರಾಜಕೀಯ, ಶೈಕ್ಷಣಿಕವಾಗಿ ಬಲಿಷ್ಠರಾದಾಗ ಮಾತ್ರ ಎಲ್ಲರೂ ಸಮಾನತೆ ಮತ್ತು ನ್ಯಾಯ ಪಡೆಯಲು ಸಾಧ್ಯ’ ಎಂದರು.

ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಕನಕ ಗುರು ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ, ಸಂಸದ ರಾಜಾ ಅಮರೇಶ್ವರ ನಾಯಕ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ ಮತ್ತು ಶಾಸಕ ಸತೀಶ ಜಾರಕಿಹೊಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.