ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರದಿಂದ ಎರಡು ದಿನ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಗುರುವಾರ ಬೆಳಿಗ್ಗೆ ಕೊಡಗು ಜಿಲ್ಲೆಯ ಪೊನ್ನಂಪೇಟೆ, ಬಳಿಕ ಕೊಯಿನಾಡು ಕಿಂಡಿ ಅಣೆಕಟ್ಟಿ ಪ್ರದೇಶಕ್ಕೆ ಭೇಟಿ ನೀಡಿ ಆ ಭಾಗದ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಬಳಿಕ, ದೇವರಕೊಲ್ಲಿ ರಾಜ್ಯ ಹೆದ್ದಾರಿ, ಮಡಿಕೇರಿ, ಕುಶಾಲನಗರದ ಮಳೆಹಾನಿ ಪ್ರದೇಶಗಳಿಗೂ ಭೇಟಿ ನೀಡಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮರುದಿನ (ಆ. 19) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ರಾತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.