‘ವಿಶೇಷ ಅರ್ಥ ಕಲ್ಪಿಸಬೇಡಿ’
‘ಮದುವೆಯೊಂದರಲ್ಲಿ ನಾನು ಮತ್ತು ಸತೀಶ ಜಾರಕಿಹೊಳಿ ಅವರು ಬೇಟಿಯಾಗಿದ್ದು ನಿಜ. ರಾಜ್ಯ ಮತ್ತು ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಮತ್ತು ಸತೀಶ್ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಏಕೆ ನೋಡುತ್ತೀರಿ’ ಎಂದು ಡಿ.ಕೆ.ಶಿವಕುಮಾರ್ ಅವರು ಪ್ರಶ್ನಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಇರುತ್ತೇವೆ, ರಾತ್ರಿ ಊಟಕ್ಕೆ ಸೇರುತ್ತೇವೆ. ಬೆಳಿಗ್ಗೆ ತಿಂಡಿಗೆ ಸೇರುತ್ತೇವೆ. ಇವೆಲ್ಲ ಇದ್ದೇ ಇರುತ್ತದೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ಥನ ಇದ್ದೇ ಇರುತ್ತದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ’ ಎಂದರು.