ಬೆಂಗಳೂರು: ‘ನಾಯಕತ್ವ ಬದಲಾವಣೆಯ ವಿಷಯವೇ ಅಪ್ರಸ್ತುತ. ಎಲ್ಲವೂ ಹೈಕಮಾಂಡ್ ನಿರ್ಧಾರ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೇ ಇಲ್ಲ. ಒಂದು ವೇಳೆ ಸಂಪುಟ ಪುನರ್ರಚನೆ ಅಥವಾ ಯಾವುದೇ ಪ್ರಮುಖ ರಾಜಕೀಯ ನಿರ್ಧಾರ ಕೈಗೊಳ್ಳುವುದಿದ್ದರೂ, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನಿಸುತ್ತದೆ’ ಎಂದು ಸ್ಪಷ್ಟಪಡಿಸಿದರು.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಿರ್ಣಯವೇ ಅಂತಿಮ’ ಎಂದರು.

ಪಕ್ಷದಲ್ಲಿ ಸಮುದಾಯವಾರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಬೇಡಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ‘ಆ ವಿಷಯದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದೆಲ್ಲವೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗುವ ವಿಚಾರಗಳು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.