‘ಘೋಷಿಸಲು ಯತೀಂದ್ರ ಯಾರು?’
ಹುಬ್ಬಳ್ಳಿ: ‘ಮುಂದಿನ ಮುಖ್ಯಮಂತ್ರಿ ಕುರಿತು ಹೇಳಿಕೆ ನೀಡಲು ಡಾ.ಯತೀಂದ್ರ ಅವರಿಗೆ ಅಧಿಕಾರ ಕೊಟ್ಟಿದ್ದು ಯಾರು? ಅವರೊಬ್ಬ ವಿಧಾನ ಪರಿಷತ್ ಸದಸ್ಯ ಅಷ್ಟೇ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಸಿದ್ದರಾಮಯ್ಯ ಅವರ ನಂತರ ನಾಯಕತ್ವ ವಹಿಸಿಕೊಳ್ಳಲು ಸತೀಶ ಜಾರಕಿಹೊಳಿ ಸಮರ್ಥರು ಎಂದು ಡಾ. ಯತೀಂದ್ರ ಹೇಳಿರು ವುದಕ್ಕೆ ಗುರುವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಎಲ್ಲವನ್ನೂ ಡಾ. ಯತೀಂದ್ರ ಹೇಳುವುದಾದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಥೆ ಏನಾಗಬೇಕು? ದೇವಾಲಯಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಹಾಗೂ ತುಲಾಭಾರ ಸೇವೆ ಸಲ್ಲಿಸುತ್ತಿದ್ದಾರೆ. ನವೆಂಬರ್ ಕ್ರಾಂತಿ ವಿಷಯದ ಚರ್ಚೆಯೂ ಸಿದ್ದರಾಮಯ್ಯ ಅವರ ಮನೆಯಲ್ಲೇ ನಡೆದಿದೆ’ ಎಂದರು.