ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕರೇ ಇಲ್ಲದ BJPಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ: ಕಾಂಗ್ರೆಸ್‌ ಪ್ರಶ್ನೆ

Published 20 ಜೂನ್ 2023, 2:27 IST
Last Updated 20 ಜೂನ್ 2023, 2:27 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣೆ ನಡೆದು ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಸುಮಾರು ಒಂದು ತಿಂಗಳಾಗಿದ್ದು, ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ರಾಜ್ಯ ಬಿಜೆಪಿ ಬಗ್ಗೆ ಕಾಂಗ್ರೆಸ್‌ ಕುಹಕವಾಡಿದೆ.

ನಾಯಕರೇ ಇಲ್ಲದ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ ಎಂದು ಕಾಂಗ್ರೆಸ್‌ ಛೇಡಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂ‌ಗ್ರೆಸ್‌, ‘ಬಿಜೆಪಿಯಲ್ಲಿ ಸೋತು ಸುಣ್ಣವಾದವರು, ರಿಟೈರ್ಮೆಂಟ್ ತೆಗೆದುಕೊಂಡವರು, ಮನೆಯಲ್ಲಿ ಕುಂತವರು, ಕೆಲಸಕ್ಕೆ ಬಾರದವರೇ ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಒಬ್ಬನೇ ಒಬ್ಬ ವ್ಯಕ್ತಿ ವಿರೋಧ ಪಕ್ಷದ ನಾಯಕ ಸಿಗಲಿಲ್ಲವೇ ಬಿಜೆಪಿಯಲ್ಲಿ‘ ಎಂದು ಪ್ರಶ್ನಿಸಿದೆ.

ನಾಯಕರೇ ಇಲ್ಲದ ಕರ್ನಾಟಕ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ? ಎಂದು ತಮಾಷೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT