ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ರಮೇಶ್ ಬಾಬು

Published 4 ಏಪ್ರಿಲ್ 2024, 16:24 IST
Last Updated 4 ಏಪ್ರಿಲ್ 2024, 16:24 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅಧಿಕಾರ ವಹಿಸಿಕೊಂಡರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಹಾಲಿ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ರಮೇಶ್ ಬಾಬು ಅವರಿಗೆ ಹೊಣೆಗಾರಿಕೆ ನೀಡಿದರು.

ಮಾಧ್ಯಮ ವಿಭಾಗದ ಸಹ ಅಧ್ಯಕ್ಷರಾಗಿ ಐಶ್ವರ್ಯಾ ಮಹದೇವ್, ಸಾಮಾಜಿಕ ಮಾಧ್ಯಮ ವಿಭಾಗದ ಸಹ ಅಧ್ಯಕ್ಷರಾಗಿ ವಿಜಯ್ ಮತ್ತಿಕಟ್ಟಿ, ಸತ್ಯಪ್ರಕಾಶ್ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯಾಂಕ್‌, ‘ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಒಂದು ವರ್ಷ ಮೂರು ತಿಂಗಳ ಹಿಂದೆ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ಅಧ್ಯಕ್ಷರಾಗಿ ನನ್ನನ್ನು ನೇಮಿಸಿದ್ದರು. ಜನಾಭಿಪ್ರಾಯ ರೂಪಿಸುವ ರೀತಿಯಲ್ಲಿ ಕೆಲಸ ಮಾಡಿದ ಸಮಾಧಾನವಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT