ಬೆಂಗಳೂರು: ಮೇಕೆದಾಟು ಪಾದಯಾತ್ರೆ ಕುರಿತು ನ್ಯಾಯಾಲಯವು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಜೆಪಿ ರಾಜ್ಯ ಘಟಕವು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಮೇಕೆದಾಟು ಪಾದಯಾತ್ರೆಯ ಬಗ್ಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ಅಗತ್ಯವಿತ್ತೇ ಎಂದು ಕೆಪಿಸಿಸಿಯನ್ನು ಪ್ರಶ್ನಿಸಿದೆ. ಕಾಂಗ್ರೆಸ್ಸಿಗರೇ, ಜನರ ಭಾವನೆಯನ್ನು ಧಿಕ್ಕರಿಸಿದಿರಿ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದಿರಿ. ನ್ಯಾಯಾಲಯಕ್ಕಾದರೂ ತಲೆಬಾಗುವಿರಾ?’ ಎಂದು ಬಿಜೆಪಿ ಪ್ರಶ್ನಿಸಿದೆ.

‘ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ನೀವು ಮೇಕೆದಾಟು ಹೋರಾಟ ನಡೆಸಿ. ಆದರೆ ಅದಕ್ಕೆ ಸಮಯ ಸಂದರ್ಭದ ಅರಿವು ಬೇಡವೇ? ಕೋವಿಡ್ ಯಾತ್ರೆಯಲ್ಲಿ ಭಾಗವಹಿಸಿದ ನಾಯಕರಿಗೆ ಸೋಂಕು ತಗಲುತ್ತಿದೆ. ಎಚ್ಚೆತ್ತುಕೊಳ್ಳಿ, ಮೇಕೆದಾಟು ಹೋರಾಟದ ಹೆಸರಿನಲ್ಲಿ ಅಮಾಯಕರ ಪ್ರಾಣ ದಾಟಿಸಬೇಡಿ’ ಎಂದು ಬಿಜೆಪಿ ಕಿಡಿಕಾರಿದೆ.

‘ನ್ಯಾಯಾಲಯ ಪಾದಯಾತ್ರೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕವೂ ಪ್ರತಿಭಟನೆ ನಮ್ಮ ಹಕ್ಕು ಎಂದು ಸಿದ್ದರಾಮಯ್ಯ ಹಠ ಮುಂದುವರಿಸುತ್ತಿದ್ದಾರೆ. ನ್ಯಾಯಾಲಯದ ಮೇಲೂ ಕಾಂಗ್ರೆಸ್ಸಿಗರಿಗೆ ಗೌರವ ಇಲ್ಲವೇ? ಕಾಂಗ್ರೆಸ್ ನಾಯಕರು ತಮ್ಮ ನೀಚ ರಾಜಕಾರಣಕ್ಕಾಗಿ ಸಂವಿಧಾನದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಕೇಸರಿ ಪಕ್ಷವು ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ-ಕೆಪಿಸಿಸಿ ಪಾದಯಾತ್ರೆ: ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗ ತರಾಟೆ

‘ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಪಾದಯಾತ್ರೆ ಬೇಡ ಎಂಬ ಸರ್ಕಾರದ ಮನವಿಗೆ ಕಾಂಗ್ರೆಸ್ ಒಪ್ಪುತ್ತಿಲ್ಲ. ನಿಮ್ಮ ವೈಯಕ್ತಿಕ ಹಠ ಸಾಧನೆಗಾಗಿ ಜನರನ್ನೇಕೆ ಸಂಕಷ್ಟಕ್ಕೆ ದೂಡುತ್ತಿದ್ದೀರಿ? ನ್ಯಾಯಾಲಯವೇ ಆಕ್ಷೇಪ ವ್ಯಕ್ತಪಡಿಸಿದೆ. ಈಗಲಾದರೂ ಸುಳ್ಳಿನ ಜಾತ್ರೆ ನಿಲ್ಲಿಸುತ್ತೀರೋ ಅಥವಾ #SuperSpreaderCONgress ಎನಿಸಿಕೊಳ್ಳುತ್ತೀರಾ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.