ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಮುಗಿಯುತ್ತಿದ್ದಂತೆ,ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ಪುನರಾಚನೆಯ ಕೂಗು ಜೋರಾಗಿದೆ. ಈ ಬೇಡಿಕೆ ಮುಂದಿಟ್ಟು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಒತ್ತಾಯಿಸಲು ಹಿರಿಯ ಶಾಸಕರ ತಂಡ ಸಜ್ಜಾಗಿದೆ.

ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿಯೂ ಆಗಿರುವ ಟಿ.ಬಿ. ಜಯಚಂದ್ರ, ಎನ್.ಎಚ್. ಕೋನರಡ್ಡಿ, ಎಸ್.ಎನ್. ನಾರಾಯಣಸ್ವಾಮಿ ಸೇರಿ 20ಕ್ಕೂ ಹೆಚ್ಚು ಶಾಸಕರು ಭಾನುವಾರ ಸಂಜೆ ದೆಹಲಿಗೆ ಪ್ರಯಾಣಿಸಲಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಟಿ.ಬಿ. ಜಯಚಂದ್ರ, ‘ಈ ಹಿಂದಿನ ಸಭೆಯಲ್ಲಿ ಚರ್ಚಿಸಿದಂತೆ 3–4 ಬಾರಿ ಗೆದ್ದಿರುವ ಶಾಸಕರು ಸ್ವ ಇಚ್ಛೆಯಿಂದ ದೆಹಲಿಗೆ ಬರುತ್ತಿದ್ದಾರೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಸಚಿವ ಸಂಪುಟದ ಅವಧಿ ಮೂರು ವರ್ಷ ಪೂರೈಸಲಿದೆ. ಮುಂದಿನ ಎರಡು ವರ್ಷಗಳಲ್ಲಿನ ರಾಜಕೀಯ ಏರುಪೇರುಗಳನ್ನು ಗಮನದಲ್ಲಿ ಇಟ್ಟುಕೊಂಡು ಇತರರಿಗೂ ಅವಕಾಶ ನೀಡಬೇಕು ಎಂಬುದು ಹಿರಿಯ ಶಾಸಕರ ಬೇಡಿಕೆ. ಸಂಪುಟ ಪುನರ್ ರಚನೆಯ ಕುರಿತ ಮನವಿಯನ್ನು ಮಲ್ಲಿಕಾರ್ಜುನ ಖರ್ಗೆ ಅವರ ಎದುರು ಮಂಡಿಸಲಾಗುವುದು. ಈ ವಿಚಾರದಲ್ಲಿ ವರಿಷ್ಠರ ನಿರ್ಧಾರವೇ ಅಂತಿಮ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಗಮನಕ್ಕೂ ಈ ಭೇಟಿಯ ವಿಷಯವನ್ನು ತಂದಿದ್ದು, ಅವರೂ ಕೂಡ ಸಮ್ಮತಿ ಸೂಚಿಸಿದ್ದಾರೆ’ ಎಂದರು.

ಕಳಪೆ ಸಾಧನೆ ತೋರಿದ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ಕನಿಷ್ಠ 20ರಿಂದ 25 ಹೊಸ ಮುಖಗಳಿಗೆ ಸ್ಥಾನ ನೀಡುವ ಮೂಲಕ ಸಂಪುಟ ಪುನರ್ ರಚನೆ ಮಾಡಬೇಕು. ಆಗ ಮಾತ್ರ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಗೆಲ್ಲಲು ಸಾಧ್ಯವಾಗಲಿದೆ. ಈ ಹಿಂದೆ ಹಿರಿಯ ಶಾಸಕರಿಗೆ ನೀಡಿದ ಭರವಸೆಯಂತೆ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಹಿರಿಯ ಶಾಸಕರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.