ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಬುಧವಾರ ಪ್ರಕಟಿಸಿದೆ.

ಹಾಲಿ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಪಕ್ಷ ಮತ್ತೆ ಅವಕಾಶ ನೀಡಿದೆ. ಮತ್ತಿಬ್ಬರು ಅಭ್ಯರ್ಥಿಗಳನ್ನಾಗಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಳವಳ್ಳಿ ಶಿವಣ್ಣ ಅವರನ್ನು ಪಕ್ಷ ಆಯ್ಕೆ ಮಾಡಿದೆ.

ಶಿವಣ್ಣ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು. ಒಬಿಸಿ ಸಮುದಾಯದ ಮೋಹನ್ ಅವರು ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಹ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಅಭ್ಯರ್ಥಿಗಳ ಆಯ್ಕೆಯಲ್ಲಿ ಒಬಿಸಿ ಸಮುದಾಯಕ್ಕೆ ಪಕ್ಷ ಹೆಚ್ಚಿನ ಆದ್ಯತೆ ನೀಡಿದೆ.

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ ಏಳು ಸದಸ್ಯರ ಅವಧಿ ಜೂನ್ 30ಕ್ಕೆ ಮುಗಿಯಲಿದ್ದು, ಆ ಸ್ಥಾನಗಳಿಗೆ ಜೂನ್ 18ಕ್ಕೆ ಚುನಾವಣೆ ನಡೆಯಲಿದೆ.

ವಿಧಾನಸಭೆಯ ಈಗಿನ ಬಲ 222 ಇದ್ದು, ಈ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ನಿಂದ ನಾಲ್ವರು ಮತ್ತು ಬಿಜೆಪಿಯಿಂದ ಇಬ್ಬರು ಸದಸ್ಯರು ಚುನಾಯಿತರಾಗುವುದು ಖಚಿತವಾಗಿದೆ.

ವಿಧಾನಪರಿಷತ್ತಿನ ಎರಡು ಸ್ಥಾನಗಳಿಗೆ ಬಿಜೆಪಿಯಲ್ಲಿ ಪೈಪೋಟಿ ಜೋರಾಗಿದೆ. ನಳಿನ್ ಕುಮಾರ್ ಕಟೀಲ್, ಶರಣು ತಳ್ಳಿಕೆರೆ, ರಘುಕೌಟಿಲ್ಯ, ವೆಂಕಟೇಶ ದೊಡ್ಡೇರಿ, ಮಂಜುಳಾ, ನೆ.ಲ.ನರೇಂದ್ರಬಾಬು, ಎಂ.ಡಿ.ಲಕ್ಷ್ಮೀನಾರಾಯಣ, ಲಿಂಗರಾಜಪಾಟೀಲ, ಶ್ರುತಿ, ಎನ್.ಮಹೇಶ್ ಅವರ ಹೆಸರನ್ನು ಪಕ್ಷಷ ರಾಜ್ಯ ಘಟಕವು ವರಿಷ್ಠರಿಗೆ ಕಳುಹಿಸಿದೆ. ಅಭ್ಯರ್ಥಿಗಳ ಆಖೈರುಗೊಳಿಸಲು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯು ಭಾನುವಾರ ಸಭೆ ನಡೆಸಿದೆ. ಅಭ್ಯರ್ಥಿಗಳ ಪಟ್ಟಿ ಒಂದೆರಡು ದಿನಗಳಲ್ಲಿ ಪ್ರಕಟವಾಗುವ ನಿರೀಕ್ಷೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.