ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯವನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು ಖಂಡಿಸಿ ರಾಜ್ಯದ ವಿವಿಧ ಪ್ರದೇಶಗಳ ಪ್ರಮುಖ ಮುಸ್ಲಿಂ ಸಂಘಟನೆಗಳು, ಸಂಘ ಸಂಸ್ಥೆಗಳು ಹಾಗೂ ಒಕ್ಕೂಟದ ಪ್ರತಿನಿಧಿಗಳು ಕಾಂಗ್ರೆಸ್ನ ಹಿರಿಯ ನಾಯಕರಿಗೆ ಪತ್ರ ಬರೆದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಿಗೆ ಈ ಪತ್ರ ಬರೆಯಲಾಗಿದೆ.

ಪತ್ರಕ್ಕೆ ವಿಜಯಪುರದ ಮೌಲಾನಾ ಸೈಯದ್ ತನ್ವೀರ್ ಹಾಶ್ಮಿ, ಬೀದರ್ನ ಅಬ್ದುಲ್ ಖದೀರ್ ಸಾಹೇಬ್, ಬೆಂಗಳೂರಿನ ಮೌಲಾನಾ ಶಬ್ಬೀರ್ ಅಹ್ಮದ್ ನದ್ವಿ, ಉಡುಪಿಯ ಕೆ.ಎಸ್. ಮೊಹಮ್ಮದ್ ಮಸೂದ್, ಮೊಹಮ್ಮದ್ ಹನೀಫ್, ಮೊಹಮ್ಮದ್ ಮೌಲಾ, ಯಾಸೀನ್ ಮಲ್ಪೆ, ಭಟ್ಕಳದ ಮೌಲಾನಾ ಅಬ್ದುರ್ರಕೀಬ್ ನದ್ವಿ, ಹುಬ್ಬಳ್ಳಿಯ ಅಶ್ರಫ್ ಅಲಿ ಬಶೀರ್, ಅಬ್ದುಲ್ ಕರೀಂ ಹುಬ್ಬಳ್ಳಿ, ಕೆ. ಅಶ್ರಫ್ ದಕ್ಷಿಣ ಕನ್ನಡ, ಅಬೂಬಕರ್ ನೇಜಾರು ಸೇರಿದಂತೆ ವಿವಿಧ ಜಿಲ್ಲೆಗಳ ಅನೇಕರು ಸಹಿ ಹಾಕಿದ್ದಾರೆ.

‘2023ರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರಿಂದಾಗಿ, ಆ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಯಿತು. ಆದರೆ, ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ ನೇಮಕಾತಿಗಳಲ್ಲಿ ಮುಸ್ಲಿಮರಿಗೆ ಸರಿಯಾದ ಪ್ರಾತಿನಿಧ್ಯ ನೀಡಲಿಲ್ಲ. ತಾರತಮ್ಯ ನೀತಿ, ನ್ಯಾಯಯುತವಾಗಿ ನಡೆದುಕೊಳ್ಳದೆ ಇರುವುದು ಮುಂದುವರಿದಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ಹಾಗೂ ಮತದಾನದ ಬಳಿಕ ಕಾಂಗ್ರೆಸ್ ನಡೆದುಕೊಂಡಿರುವ ರೀತಿಯಿಂದ ಮುಸ್ಲಿಂ ಸಮುದಾಯಕ್ಕೆ ತೀವ್ರ ಆಘಾತವಾಗಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ನ್ಯಾಯವಾಗಿ ನೀಡಲೇಬೇಕಾಗಿದ್ದ ಟಿಕೆಟ್ ನಿರಾಕರಿಸಲಾಯಿತು. ಸಮುದಾಯದ ನ್ಯಾಯಯುತ ಬೇಡಿಕೆಯನ್ನು ಕಡೆಗಣಿಸಲಾಯಿತು. ಟಿಕೆಟ್ ಕೇಳಿದ್ದೇ ಅಪರಾಧ ಎಂಬಂತೆ ಪಕ್ಷದ ವರಿಷ್ಠರು ನಡೆದುಕೊಂಡರು. ಇಷ್ಟು ಸಾಲದು ಎಂಬಂತೆ ಮತದಾನ ಮುಗಿದ ಕೂಡಲೇ ಸೂಕ್ತ ಕಾರಣ ನೀಡದೆ, ವಿವರಣೆಗೆ ಅವಕಾಶವನ್ನೂ ನೀಡದೆ ಸಮುದಾಯದ ನಾಯಕರನ್ನು ಏಕಾಏಕಿ ಪಕ್ಷದಿಂದ ವಜಾ ಮಾಡಲಾಯಿತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಮುಸಲ್ಮಾನರಿಗೆ ಕಾಂಗ್ರೆಸ್ ಕೊಟ್ಟಷ್ಟು ರಕ್ಷಣೆ ಬೇರೆ ಯಾವುದೇ ಪಕ್ಷ ಕೊಟ್ಟಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಹೇಳಿರುವುದು ಖಂಡನೀಯ. ಸರ್ಕಾರ ಮತ್ತು ಪಕ್ಷ ಕೂಡಲೇ ಗಮನಹರಿಸಿ ಮುಸ್ಲಿಂ ಸಮುದಾಯದ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು. ತನ್ನ ತಪ್ಪುಗಳನ್ನು ತಿದ್ದಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.