ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಪಕ್ಷ ಕೊಟ್ಟಿದ್ದನ್ನು ಎಂದಿಗೂ ಕಸಿದುಕೊಂಡಿಲ್ಲ: ಡಿ.ಕೆ. ಸುರೇಶ್

Published 13 ಏಪ್ರಿಲ್ 2024, 16:14 IST
Last Updated 13 ಏಪ್ರಿಲ್ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕಸಭೆ ಚುನಾವಣೆ ನಂತರ ‘ಗ್ಯಾರಂಟಿ’ ಯೋಜನೆಗಳು ಸ್ಥಗಿತವಾಗಲಿವೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಕೊಟ್ಟಿದ್ದನ್ನು ಎಂದಿಗೂ ಕಸಿದುಕೊಂಡಿಲ್ಲ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಹೇಳಿದರು.

ಬನ್ನೇರುಘಟ್ಟದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ‘ನಾವು ಬಿಜೆಪಿಯವರಂತೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ, ಎಲ್ಲರ ಖಾತೆಗೆ ₹ 15 ಲಕ್ಷ ಹಾಕುತ್ತೇವೆ, ರೈತರ ಆದಾಯ ಇಮ್ಮಡಿ ಮಾಡುತ್ತೇವೆಂದು ಸುಳ್ಳು ಹೇಳಿಲ್ಲ. ನಾವು ಕೊಟ್ಟ ಮಾತಿನಂತೆ ನಡೆದು, ಬಡವರಿಗೆ ನೆರವಾಗಿ ಪ್ರತಿ ತಿಂಗಳು ₹ 5 ಸಾವಿರದಷ್ಟು ಉಳಿತಾಯವಾಗುವಂತೆ ಮಾಡಿದ್ದೇವೆ. ಆ ಮೂಲಕ ಜನರ ಬದುಕಿನಲ್ಲಿ ಬದಲಾವಣೆ ತಂದಿದ್ದೇವೆ’ ಎಂದರು.

‘ಅಭಿವೃದ್ಧಿ ವಿಚಾರದಲ್ಲಿ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ತಂದು ಈ ಭಾಗ ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಸಿದ್ದರಾಮಯ್ಯ ಅವರ ಮೊದಲ ಸರ್ಕಾರ ಇದ್ದಾಗ ಬನ್ನೇರುಘಟ್ಟದಿಂದ ಜಿಗಣಿವರೆಗೆ ರಸ್ತೆ ಮಂಜೂರಾತಿ ಮಾಡಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದೇನೆ. ಈ ಭಾಗದ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡಲಾಗಿದೆ’ ಎಂದರು.

‘ಈ ಭಾಗದ ಜನರಿಗೆ ಕಾವೇರಿ ನೀರು ಪೂರೈಸಲು ಡಿ.ಕೆ. ಶಿವಕುಮಾರ್ ಆದೇಶ ನೀಡಿದ್ದು, ಪೈಪ್‌ಲೈನ್‌ ಕಾರ್ಯಗಳು ಸಾಗಿವೆ. ಇಲ್ಲಿನ ಪಂಚಾಯಿತಿಗೆ ಕಾವೇರಿ ನೀರು ಒದಗಿಸಲು ಪ್ರಯತ್ನಿಸುತ್ತಿದ್ದೇವೆ. ಇದು ಕಾಂಗ್ರೆಸ್ ಮತ್ತು ಡಿ.ಕೆ. ಸುರೇಶ್ ಗ್ಯಾರಂಟಿ. ಈ ಭಾಗದಲ್ಲಿ ಕೆರೆ ತುಂಬಿಸುವ ಯೋಜನೆ ಅನುಷ್ಠಾನ ಮಾಡಿದ್ದು, ಉಳಿದ ಕೆರೆಗಳನ್ನು ಮುಂದಿನ ದಿನಗಳಲ್ಲಿ ಮಾಡಲಿದ್ದೇವೆ. ಈ ಭಾಗದ ಅಭಿವೃದ್ಧಿಗೆ ನಾವು ಬದ್ಧ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT