ಬೆಂಗಳೂರು: 'ಆರ್ಎಸ್ಎಸ್ ಪಥಸಂಚನಲಕ್ಕೆ ಅವಕಾಶ ನೀಡದಿರುವ ಕಾಂಗ್ರೆಸ್ ಸರ್ಕಾರದ ನಿರಂಕುಶವಾದಿ ನಡೆಗೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅಶೋಕ, 'ಈ ಹಿಟ್ಲರ್ ಆಟ ಜಾಸ್ತಿ ದಿನ ನಡೆಯುವುದಿಲ್ಲ. ಈ ರೀತಿ ಹಿಂಬಾಗಿಲಿನಿಂದ ಆರ್ಎಸ್ಎಸ್ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ ಆರ್ಎಸ್ಎಸ್ ನಿಷೇಧ ಮಾಡಿ ನೋಡೋಣ' ಎಂದು ಸವಾಲು ಹಾಕಿದ್ದಾರೆ.

'ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರು ಸದಾ ಜೇಬಿನಲ್ಲಿಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರಿಕರ ಮೂಲಭೂತ ಹಕ್ಕುಗಳಿಗೆ ಸ್ಥಾನ ಇಲ್ಲವೇ?' ಎಂದು ಅವರು ಪ್ರಶ್ನಿಸಿದ್ದಾರೆ.

'ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವ ಮುನ್ನ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು' ಎಂಬ ರಾಜ್ಯ ಸರ್ಕಾರದ ಆದೇಶ ಅನುಷ್ಠಾನಕ್ಕೆ ಹೈಕೋರ್ಟ್ ತಡೆ ನೀಡಿತ್ತು.
.‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂ ಕೋರ್ಟ್ ಅಂಕುಶ.ಆರ್ಎಸ್ಎಸ್ ಜನಪ್ರಿಯತೆ ಸಹಿಸದ ಸಿ.ಎಂ ಸಿದ್ದರಾಮಯ್ಯ: ಸಂಸದ ಜಗದೀಶ ಶೆಟ್ಟರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.