ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಇಂದು

Published 22 ಏಪ್ರಿಲ್ 2024, 22:44 IST
Last Updated 22 ಏಪ್ರಿಲ್ 2024, 22:44 IST
ಅಕ್ಷರ ಗಾತ್ರ

ಬೆಂಗಳೂರು:‌ ಸುಪ್ರೀಂ ಕೋರ್ಟ್‌ಗೆ ನೀಡಿದ ಭರವಸೆಯಂತೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಮಂಗಳವಾರ ಪ್ರತಿಭಟನೆ ನಡೆಸಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ.

ಬರ ಪರಿಹಾರ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ 2023ರ ಸೆಪ್ಟೆಂಬರ್‌ನಲ್ಲಿಯೇ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಆದರೆ, ಕೇಂದ್ರ ಸರ್ಕಾರ ಮನವಿಗೆ ಸ್ಪಂದಿಸದ ಕಾರಣ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಬರ ನಿರ್ವಹಣೆಗೆ ಹಣಕಾಸು ನೆರವು ನೀಡುವಂತೆ ಕರ್ನಾಟಕ ಸರ್ಕಾರ ಮುಂದಿಟ್ಟಿರುವ ಬೇಡಿಕೆಯನ್ನು ಈಡೇರಿಸಲು ‌ಚುನಾವಣಾ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರವು ಸೋಮವಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ಈ ಹಿನ್ನೆಲೆಯಲ್ಲಿ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಬೇಕು ಆಗ್ರಹಿಸಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT