ಅಧಿಕಾರದ ಮದದಿಂದ ಕಾಂಗ್ರೆಸ್ ನಾಯಕರು ರೈತರ ಮೇಲೆ ದಬ್ಬಾಳಿಕೆ ಮಾಡಿರುವುದು, ಅನ್ನದಾತರಿಗೆ ಅಪಮಾನ ಮಾಡಿರುವುದು ಇದೇನು ಮೊದಲಲ್ಲ. ಆ ಪಟ್ಟಿ ಬಹಳ ದೊಡ್ಡದಿದೆ. ಆದರೆ ಹಿರಿಯರು, ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ @kharge ಅವರೂ ಸಹ ಈಗ ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದು ಕನ್ನಡ ನಾಡಿನ ಕೃಷಿಕರ ದುರಂತ.
ರೈತರ ಬಗ್ಗೆ ನಿಮ್ಮ ನಡವಳಿಕೆ ಕಂಡು ಬಹಳ ಬೇಸರವಾಯಿತು. ನಿಮ್ಮಂತಹ ಹಿರಿಯರಿಂದ ಇಂಥ ವರ್ತನೆಯನ್ನು ನಾನು ಖಂಡಿತ ನಿರೀಕ್ಷೆ ಮಾಡಿರಲಿಲ್ಲ. ಕಷ್ಟದಲ್ಲಿರುವ ರೈತ ನಿಮ್ಮಂಥವರ ಬಳಿ ಬಂದು ದುಃಖ ತೋಡಿಕೊಳ್ಳದೆ ಇನ್ನು ಯಾರ ಬಳಿ ಹೋಗಿ ಹೇಳಿಕೊಳ್ಳಬೇಕು?
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 8, 2025
ಬೆಳೆ ಹಾನಿಯಿಂದ ಕಂಗೆಟ್ಟು ಹೋದ ಯುವ ರೈತನೊಬ್ಬ ತಮ್ಮ ಬಳಿ ನೋವು ತೋಡಿಕೊಳ್ಳಲು ಬಂದಾಗ ‘ತೊಗರಿ ಬೇಳೆ ಹಾನಿಯಾಗಿದ್ದನ್ನು ನನ್ನಬಳಿ ತೋರಿಸಲು ಬಂದಿದ್ದೀಯಾ? 'ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕರೂ ಆದ ಎಐಸಿಸಿ ಅಧ್ಯಕ್ಷ @kharge ಅವರು ಏರು ಧ್ವನಿಯಲ್ಲಿ ಗದರಿಸಿದ್ದಾರೆ "ಆರು ಹಡೆದವಳ ಮುಂದೆ ಹೇಳ್ತೀಯಾ....."ಎಂಬ ಗಾದೆ ಮಾತು ಹೇಳಿ ಪ್ರಧಾನಿ… pic.twitter.com/H7j6RC1NTG