ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದೆ. ಈ ನಡುವೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಯಿತೇ? ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಯಿತೇ?, ಕುರ್ಚಿ ಕಿತ್ತಾಟದಲ್ಲಿ ಅನ್ನದಾತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದೇಕೆ. ಕರ್ನಾಟಕದ ಇತಿಹಾಸದಲ್ಲಿ ರೈತರ ನೋವಿಗೆ ಸ್ಪಂದಿಸದ ಈ ರೀತಿಯ ಸಂವೇದನಾರಹಿತ ಸರ್ಕಾರ ಕಂಡಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
.ಪಾಕಿಸ್ತಾನ: 17 ವರ್ಷಗಳ ಹಿಂದೆ ಕಳೆದುಹೋಗಿದ್ದ ಯುವತಿಯನ್ನು ಹುಡುಕಿಕೊಟ್ಟ AI.ಉಲ್ಭಣಿಸಿದ ದೆಹಲಿ ವಾಯುಮಾಲಿನ್ಯ: CJI ಅಸ್ವಸ್ಥ; ವರ್ಚುವಲ್ನಲ್ಲೇ SC ಕಲಾಪ!.
ಕೊಟ್ಟ ಮಾತಿನಂತೆ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕಿದ್ದ ಕಾಂಗ್ರೆಸ್ ಸರ್ಕಾರ ಇಂದು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ. ರೈತರ ಬದುಕು ನಾಶವಾದರೂ ಪರವಾಗಿಲ್ಲ, ನಮ್ಮ ಕುರ್ಚಿ ಭದ್ರವಾಗಿರಲಿ ಎನ್ನುವಂತಿದೆ ಸಿದ್ದರಾಮಯ್ಯ ಸರ್ಕಾರದ ನಡೆ ಎಂದು ಟೀಕಿಸಿದ್ದಾರೆ.

ಗುರ್ಲಾಪುರದಲ್ಲಿ ಪ್ರತಿಭಟನಾ ನಿರತ ರೈತ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘೋರ ದುರಂತ ಸಂಭವಿಸಿತು. ಆದರೆ, ಈ ಹೃದಯಹೀನ ಸರ್ಕಾರದ ಯಾವ ಮಂತ್ರಿಯೂ ರೈತನ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಇಷ್ಟಕ್ಕೂ ಸಕ್ಕರೆ ಸಚಿವರು ಎಲ್ಲಿದ್ದಾರೆ?, ಕೃಷಿ ಸಚಿವರು ಏನು ಮಾಡುತ್ತಿದ್ದಾರೆ?, ಜಿಲ್ಲಾ ಉಸ್ತುವಾರಿ ಸಚಿವರುಗಳು ಯಾಕೆ ತಲೆ ಮರೆಸಿಕೊಂಡಿದ್ದಾರೆ?. ತಮ್ಮದೇ ಸರ್ಕಾರದ ಅಸಡ್ಡೆಯಿಂದಾಗಿ ಸಾವು ಬದುಕಿನ ಹೋರಾಟದಲ್ಲಿದ್ದ ರೈತನಿಗೆ ಸಾಂತ್ವನ ಹೇಳುವಷ್ಟು ಕನಿಷ್ಠ ಮಾನವೀಯತೆಯೂ ಇಲ್ಲದ ಮಂತ್ರಿಗಳು ಈ ರಾಜ್ಯಕ್ಕೆ ಬೇಕೇ? ಎಂದು ಪ್ರಶ್ನಿಸಿದ್ದಾರೆ.
.ಹೃದಯಾಘಾತದಿಂದ ದೂರ ಇರಲು ಈ ಹಣ್ಣನ್ನು ತಿನ್ನಿರಿ: ನಟಿ ಭಾಗ್ಯಶ್ರೀ ಸಲಹೆ.ಅಧಿವೇಶನದಲ್ಲಿ ಮೊದಲ ದಿನವೇ ನಿಲುವಳಿ ಸೂಚನೆ ಮೂಲಕ ಸಮಸ್ಯೆಗಳ ಚರ್ಚೆ: ಅಶೋಕ.
ರೈತರ ಬೇಡಿಕೆಯಂತೆ ಮೆಕ್ಕೆ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲು ನೀವು ಯಾರ ಆದೇಶಕ್ಕಾಗಿ ಕಾಯುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ?, ನಿಮಗೆ ನಿಮ್ಮ ದೆಹಲಿ ಹೈಕಮಾಂಡ್ನಿಂದ ಸೂಚನೆ ಬರಬೇಕೇ?, ರಾಹುಲ್ ಗಾಂಧಿ ಮತ್ತು ರಣದೀಪ್ ಸುರ್ಜೇವಾಲಾ ಅವರ ಅನುಮತಿ ಪತ್ರ ಬೇಕೇ?, ರೈತರ ಜೀವ ಉಳಿಸಲು ಹೈಕಮಾಂಡ್ನ ಆದೇಶ ಬೇಕೆ?, ನನ್ನ 30 ವರ್ಷದ ರಾಜಕಾರಣದಲ್ಲಿ ಇಂತಹ ರೈತ ವಿರೋಧಿ, ಸಂವೇದನಾರಹಿತ ಸರ್ಕಾರವನ್ನು ನಾನು ಕಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
.ಪೋಕ್ಸೊ; ಮೊದಲ ಪ್ರಕರಣದಲ್ಲಿ ಮುರುಘಾ ಶರಣರು ಸೇರಿ ಮೂವರು ಆರೋಪ ಮುಕ್ತ.‘ನ್ಯಾನೊ ಬನಾನ ಪ್ರೊ’ ಬಳಸಿ ಆಧಾರ್, ಪ್ಯಾನ್ ತಯಾರು: ಟೆಕಿ ಬಿಚ್ಚಿಟ್ಟ ಘೋರ ಸತ್ಯ.ತಿರುಪತಿ ದೇವಸ್ಥಾನಕ್ಕೆ ₹9 ಕೋಟಿ ದೇಣಿಗೆ ನೀಡಿದ ಅಮೆರಿಕ ಮೂಲದ ಭಕ್ತ .IND vs SA | ದ.ಆಫ್ರಿಕಾ ವಿರುದ್ಧ ಹೀನಾಯ ಸೋಲು: ಕೋಚ್ ಗಂಭೀರ್ ಹೇಳಿದ್ದಿಷ್ಟು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.