ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪಕ್ಷ ನಾಯಕನ ಹುದ್ದೆಗೆ ಬಿಡ್‌ ಸಲ್ಲಿಸಿಲ್ಲವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

Published 14 ಸೆಪ್ಟೆಂಬರ್ 2023, 7:41 IST
Last Updated 14 ಸೆಪ್ಟೆಂಬರ್ 2023, 7:41 IST
ಅಕ್ಷರ ಗಾತ್ರ

ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಕೊಡಿಸುವ ಭರವಸೆ ನೀಡಿ ಕೊಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಡಿ ಭಾಷಣಕಾರ್ತಿ ಚೈತ್ರಾ ಕುಂದಾಪುರ ಬಂಧನದ ಬೆನ್ನಲ್ಲೇ, ಕಾಂಗ್ರೆಸ್ ಟ್ವೀಟ್ ಮಾಡಿ, ‘ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ?’ ಎಂದು ಪ್ರಶ್ನಿಸಿದೆ.

ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಕುರಿತು ಹೇಳಿರುವ ಕಾಂಗ್ರೆಸ್, ‘ಮುಖ್ಯಮಂತ್ರಿ ಹುದ್ದೆಗೆ ₹2500 ಕೋಟಿ, ಮಂತ್ರಿಗಿರಿಗೆ ₹70ಕೋಟಿಯಿಂದ ₹80ಕೋಟಿ, ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ₹7 ಕೋಟಿ... ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು’ ಎಂದಿದೆ.

‘ಯತ್ನಾಳ್ ಆಣೆಗೂ ಇದು ನಾವು ಹೇಳಿದ್ದಲ್ಲ. ಈ ಮಾರಾಟದ ಆಟದಲ್ಲಿ ವಿರೋಧ ಪಕ್ಷದ ನಾಯಕನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್‌ ಸಲ್ಲಿಸಿಲ್ಲವೇ?’ ಎಂದು ಪ್ರಶ್ನಿಸಿದೆ.

ಕಾಂಗ್ರೆಸ್‌ನ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಕೆಲವರು, ‘ಅವರನ್ನೇ ಕೇಳಬೇಕು. ದೇಶವನ್ನೇ ಮಾರುವವರಿಗೆ ಇದು ಯಾವ ಲೆಕ್ಕ ಎಂದು ಪ್ರಶ್ನಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗೆ ನೀವೆಷ್ಟು ತಗೋತೀರಾ ಎನ್ನುವುದನ್ನು ಹೇಳಿಬಿಡಿ ಎಂದು ಕಾಂಗ್ರೆಸ್‌ ಪಕ್ಷವನ್ನು ಮತ್ತೊಬ್ಬರು ಕೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT