ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತನಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

2018ರಲ್ಲಿ ಡಿ.ಕೆ. ಶಿವಕುಮಾರ್ ಅವರು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದಾಗ ಅವರನ್ನು ಭೇಟಿಯಾದ ಹೈದರಾಬಾದ್ ಕರ್ನಾಟಕದ ನರ್ಸಿಂಗ್ ಕಾಲೇಜು ಮಾಲೀಕರ ನಿಯೋಗದಲ್ಲಿ ದಿವ್ಯಾ ಹಾಗರಗಿ ಸಹ ಇದ್ದರು. ಅದೇ ಚಿತ್ರದ ಅರ್ಧ ಭಾಗವನ್ನು ಬಿಜೆಪಿ ಕರ್ನಾಟಕ ಟ್ವಿಟರ್ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಲಾಗಿತ್ತು.

ಈ ಬಗ್ಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಕರ್ನಾಟಕ ಕಾಂಗ್ರೆಸ್, ಡಿ.ಕೆ. ಶಿವಕುಮಾರ್ ಅವರೊಂದಿಗೆ ಕೇವಲ ದಿವ್ಯಾ ಹಾಗರಗಿಯ ಫೋಟೋ ಮಾತ್ರವಲ್ಲ, ನಿಮ್ಮ ಪಕ್ಷದ ಬಹುತೇಕ ನಾಯಕರ ಫೋಟೋಗಳೂ ಇವೆ.

ಹಾಗೆಂದ ಮಾತ್ರಕ್ಕೆ ಅವರೆಲ್ಲ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ ಎಂದು ಉಚ್ಛಾಟಿಸುವಿರಾ!? ನಿಮ್ಮ ನಾಯಕರೇ ಆಕೆಯ ಮನೆಯನ್ನು ಹುಡುಕಿಕೊಂಡು ಹೋಗಿ ಆತಿಥ್ಯ ಸ್ವೀಕರಿಸಿದ್ದು ಯಾವ ಕಾರಣಕ್ಕೆ, ಆಕೆಯ ಬಂಧನವಾಗದಿವುದು ಏಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ.. ಡಿಕೆಶಿ– ದಿವ್ಯಾ ಗೋಡಂಬಿ– ಬಾದಾಮಿ ತಿನ್ನುತ್ತಿದ್ದಾರೆಯೇ?: ಬಿಜೆಪಿ ಪ್ರಶ್ನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.