ದಾವಣಗೆರೆ: ರಮೇಶ್ ಜಾರಕಿಹೊಳಿ ಬಿಜೆಪಿಗೆ ಹೋದರೆ ಹೋಗಲಿ. ಆ ಗಿರಾಕಿ ಹೊಗುತ್ತೆ ಎಂದು ಗೊತ್ತಿತ್ತು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ನಗರದ ಐಎಂಎ ಹಾಲ್ ಮತಗಟ್ಟೆ 110 ರಲ್ಲಿ ಮತ ಚಲಾಯಿಸಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.

ಯಾರುಹೋದರೂ ಸಮ್ಮಿಶ್ರ ಸರ್ಕಾರಕ್ಕೆ ಯಾವ ತೊಡಕೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಾಗಿ ಹೇಳಿದ ವಿಚಾರ ಬಗ್ಗೆ ಕೇಳಿದ ಪ್ರಶ್ನೆಗೆ, ‘ಯಾರು ಬೇಕಾದರೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಬಹುದು. ನಾನೂ ಹೇಳುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ದಾವಣಗೆರೆಯಲ್ಲಿ ಕಳೆದ ಚುನಾವಣೆಯಲ್ಲಿ ಇದ್ದ ವಾತಾವರಣಕ್ಕಿಂತ ಭಿನ್ನ ಪರಿಸ್ಥಿತಿ ಈಗ ಇದೆ. ಉತ್ತಮ ಮತದಾನವಾಗುತ್ತಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ. ರಾಜ್ಯದಲ್ಲಿ 20 ಸ್ಥಾನಗಳುಮೈತ್ರಿ ಪಕ್ಷಗಳಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪುತ್ರರಾದ ಎಸ್.ಎಸ್.ಗಣೇಶ್, ಎಸ್.ಎಸ್.ಬಕ್ಕೇಶ್, ಕುಟುಂಬದ ಸದಸ್ಯರಾದ ಪ್ರೀತಿ ಬಕ್ಕೇಶ್, ರೇಖಾ ಗಣೇಶ್ ಇತರರ ಜತೆಗೆ ಬಂದು ಶಾಮನೂರು ಶಿವಶಂಕರಪ್ಪ ಮತ ಚಲಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.