ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪಕ್ಷವು, ‘ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಸಿದ ಕಾರಣಕ್ಕೆ ಕೇಂದ್ರ ಸರ್ಕಾರವು ಕರ್ನಾಟಕದ ಜನರ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳುತ್ತಿದೆ’ ಎಂದು ಕಿಡಿಕಾರಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಹಾಗೂ ಪಕ್ಷದ ಕಾನೂನು ಘಟಕದ ಅಧ್ಯಕ್ಷ ಅಭಿಷೇಕ್ ಮನುಸಿಂಘ್ವಿ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ 3–4 ದಿನಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣ ದಾಖಲಿಸಲು ಹೇಗೆ ಸಾಧ್ಯ. ಸಿದ್ದರಾಮಯ್ಯ ಅವರನ್ನು ಬೆದರಿಸುವ ಹಾಗೂ ಕಿರುಕುಳ ನೀಡುವ ಉದ್ದೇಶ ಇದರ ಹಿಂದೆ’ ಎಂದು ಆರೋಪಿಸಿದರು.

‘ಮುಡಾ ಪ್ರಕರಣದಲ್ಲಿ ಹಣ ವರ್ಗಾವಣೆ ಆಗಿಲ್ಲ. ಸಿದ್ದರಾಮಯ್ಯ ಕುಟುಂಬಕ್ಕೆ ಬದಲಿ ನಿವೇಶನ ನೀಡಲಾಗಿದೆ. ಇಂತಹ ಸನ್ನಿವೇಶದಲ್ಲಿ ಲೋಕಾಯುಕ್ತ ಎಫ್ಐಆರ್ ಆಧಾರದಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ನಿಯಮಗಳನ್ನು ಇಲ್ಲಿ ಅನ್ವಯಿಸಲು ಸಾಧ್ಯವಿಲ್ಲ’ ಎಂದರು.

ಇ.ಡಿ. ಪ್ರಕರಣವು ಬಿಜೆಪಿಯನ್ನು ಸೋಲಿಸಿದ್ದಕ್ಕೆ ಕರ್ನಾಟಕದ ಮೇಲಿನ ದಾಳಿ ಎಂದು ವ್ಯಾಖ್ಯಾನಿಸಿದ ಜೈರಾಮ್, ‘2023ರ ಮೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಸ್ವೀಕರಿಸಿದ ದಿನದಿಂದ ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಕಿರುಕುಳ ನೀಡಲಾಗುತ್ತಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರವು ಐದು ವರ್ಷಗಳ ಕಾಲ ಸರ್ಕಾರ ನಡೆಸಲಿದೆ. ಜನರಿಗೆ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.