ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

HDK ಮನೆಗೆ ಅಕ್ರಮ ವಿದ್ಯುತ್‌ ಸಂಪರ್ಕ: ಇಷ್ಟು ದಾರಿ‌ದ್ರ್ಯ ಬಂತೇ ಎಂದ ಕಾಂಗ್ರೆಸ್‌

Published 14 ನವೆಂಬರ್ 2023, 9:17 IST
Last Updated 14 ನವೆಂಬರ್ 2023, 9:17 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಜೆ.ಪಿ ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ. ಇಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹ ಜ್ಯೋತಿಗೆ ಅರ್ಜಿ ಹಾಕಬಹುದಿತ್ತು ಎಂದು ಚಾಟಿ ಬೀಸಿದೆ.

‘ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ. ಕುಮಾರಸ್ವಾಮಿಯವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ. ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್‌ಗಳಿವೆಯಲ್ಲವೇ’ ಎಂದು ಛೇಡಿಸಿದೆ.

‘ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ಬರ ಎದುರಿಸುತ್ತಿದ್ದೀರಾ‘ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಅದೇನೋ ಪತ್ರಿಕಾಗೋಷ್ಠಿ ನಡೆಸಿ ಕರ್ನಾಟಕ ಕತ್ತಲಲ್ಲಿದೆ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ. ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?
– ಕಾಂಗ್ರೆಸ್‌ ಟ್ವೀಟ್

ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT