ಬೆಂಗಳೂರು: ಬಿಜೆಪಿಯವರಿಗೆ ಇಂಡಿಯಾ ಮೇಲೆ ದ್ವೇಷ ಏಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಇಂಡಿಯಾ ಮೈತ್ರಿಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಟೀಕೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಅಲ್ಲದೇ ಭಾರತದ ಬಗ್ಗೆ ಬಿಜೆಪಿ ಪ್ರಧಾನಿ ಮೋದಿಗೆ ಕಿಂಚಿತ್ತೂ ಗೌರವವಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಕಾಂಗ್ರೆಸ್ ಮಾಡಿರುವ ಟ್ವೀಟ್ ಹೀಗಿದೆ:
‘India ಪದವನ್ನು ಈಸ್ಟ್ ಇಂಡಿಯಾ, ಇಂಡಿಯನ್ ಮುಜಾಹಿದ್ದೀನ್ ಗಳಿಗೆ ಹೋಲಿಸಿದ ಮೋದಿಯವರು ದೇಶದ್ರೋಹದ ಕೆಲಸ ಮಾಡಿದ್ದಾರೆ. ಕೇವಲ ರಾಜಕೀಯ ಕಾರಣಗಳಿಗಾಗಿ ದೇಶದ ಹೆಸರನ್ನು ಅವಮಾನಿಸುವ ಮಟ್ಟಕ್ಕೆ ಇಳಿಯಬಾರದು, ಹಿಂದೆ ವಿದೇಶಗಳಲ್ಲಿ ನಿಂತು ಭಾರತದ ಬಗ್ಗೆ ಅವಮಾನಕರವಾಗಿ ಮಾತಾಡಿದ ಮೋದಿಗೆ ದೇಶದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ ಎನ್ನುವುದು ಸಾಬೀತಾಗಿದೆ. ಬಿಜೆಪಿಗರಿಗೆ INDIA ಮೇಲೆ ದ್ವೇಷವೇಕೆ?’.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.