ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ನೀಡಿದ್ದ ಮೀಸಲಾತಿ ಪ್ರಮಾಣ ಕಡಿಮೆ ಮಾಡಿ ಅನ್ಯಾಯ ಮಾಡಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ ಮತ್ತು ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಸರ್ಕಾರ ಇದ್ದಾಗ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅದನ್ನು ರದ್ದು ಮಾಡಿ ದ್ರೋಹ ಎಸಗಿದೆ ಎಂದು ದೂರಿದರು.

‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಎಸ್ಸಿ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೂ, ಎಸ್ಟಿ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೂ ಹೆಚ್ಚಿಸಲಾಗಿತ್ತು. ಎಸ್ಟಿ ಸಮುದಾಯದ ನ್ಯಾಯಯುತ ಬೇಡಿಕೆಯನ್ನು ಈಡೇರಿಸಿದ್ದೆವು. ಮಾಧುಸ್ವಾಮಿ ವರದಿ, ಸದಾಶಿವ ಆಯೋಗದ ವರದಿ ಗಮನದಲ್ಲಿಟ್ಟುಕೊಂಡು ನಾವು ಮೀಸಲಾತಿ ಹೆಚ್ಚಳ ಮಾಡಿದ್ದೆವು’ ಎಂದು ಅಶೋಕ ವಿವರಿಸಿದರು.

‘ಮೀಸಲಾತಿ ಪ್ರಮಾಣ ಕಡಿಮೆ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರದ ಘನಂದಾರಿ ಕೆಲಸ. ಇದು ದಲಿತ ಪರ ನೀತಿಯೇ? ಎಸ್ಟಿ ಸಮುದಾಯದ ಮೀಸಲಾತಿಯನ್ನು ಶೇ 7ರಿಂದ ಶೇ 3ಕ್ಕೆ ಇಳಿಸಲಾಗಿದೆ. ಎಸ್ಟಿ ಸಮುದಾಯ ಈಗ ನ್ಯಾಯ ಕೇಳುತ್ತಿದೆ. ಇದಕ್ಕೆ ನಿಮ್ಮ ಉತ್ತರವೇನು? ಇವರು ನ್ಯಾಯ ಪಡೆಯಲು ಇನ್ನೆಷ್ಟು ವರ್ಷ ಹೋರಾಟ ಮಾಡಬೇಕು’ ಎಂದು ಪ್ರಶ್ನಿಸಿದರು.

ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ‘ಬಿಜೆಪಿ ಸರ್ಕಾರ ಇದ್ದಾಗ ಎಸ್ಸಿ,ಎಸ್ಟಿ ಸಮುದಾಯಗಳ ಬಹುದಿನಗಳ ಹೋರಾಟಕ್ಕೆ ತೆರೆ ಎಳೆಯಲು ಮೀಸಲಾತಿ ಪ್ರಮಾಣ ಹೆಚ್ಚಿಸಿತ್ತು. ಈ ಏರಿಕೆ ಬಳಿಕ ಸುಮಾರು ಮೂರುವರೆ ವರ್ಷಗಳ ಕಾಲ ಯಾವ ತೊಂದರೆ, ತೊಡಕು ಇಲ್ಲದೆ ಎಲ್ಲ ರೀತಿಯ ಸವಲತ್ತುಗಳು ಈ ಜನಾಂಗಕ್ಕೆ ಲಭಿಸಿವೆ’ ಎಂದು ಹೇಳಿದರು.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ರಾಜುಗೌಡ ನಾಯಕ್ ಮಾತನಾಡಿ, ‘ಛತ್ತೀಸಗಢದಲ್ಲಿ ಎಸ್ಟಿಗೆ ಶೇ 32, ಎಸ್ಸಿಗೆ ಶೇ 10, ಒಬಿಸಿಗೆ ಶೇ 16 ಸೇರಿ ಒಟ್ಟು ಶೇ 58 ಮೀಸಲಾತಿ ನೀಡಲಾಗಿದೆ. ಅಲ್ಲಿ ಎಸ್ಸಿ, ಎಸ್ಟಿ ಜನಸಂಖ್ಯೆಯ ಆಧಾರದಲ್ಲಿ ಶೇ 50ಕ್ಕಿಂತ ಹೆಚ್ಚು ಕೊಡಿ ಎಂದು ಕೋರ್ಟ್ ಹೇಳಿದೆ. ಕರ್ನಾಟಕದಲ್ಲಿ ಏಕೆ ಕೊಡಲು ಸಾಧ್ಯವಾಗುತ್ತಿಲ್ಲ? ಏಕೆಂದರೆ ಕೋರ್ಟ್ನಲ್ಲಿ ರಾಜ್ಯ ಸರ್ಕಾರ ಸರಿಯಾಗಿ ವಾದ ಮಂಡಿಸುತ್ತಿಲ್ಲ’ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ವಿರೋಧಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸದಾಸ ಕರಿಯಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-489239553

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.