ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

₹8,800 ಕೋಟಿ ಸಿಎಸ್‌ಆರ್‌ ನಿಧಿ ಶಿಕ್ಷಣಕ್ಕೆ ಮೀಸಲು: ಡಿ.ಕೆ. ಶಿವಕುಮಾರ್‌

Published 5 ಸೆಪ್ಟೆಂಬರ್ 2024, 16:07 IST
Last Updated 5 ಸೆಪ್ಟೆಂಬರ್ 2024, 16:07 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಬರುವ ₹ 8,800 ಕೋಟಿ ಸಿಎಸ್‌ಆರ್‌ ನಿಧಿಯನ್ನು ಮುಂದಿನ 3–4 ವರ್ಷಗಳ ಕಾಲ ಶಾಲೆಗಳ ನಿರ್ಮಾಣ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡುವಂತೆ ಮನವಿ ಮಾಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಕೆಪಿಸಿಸಿ ಕಚೇರಿಯ ‘ಭಾರತ ಜೋಡೊ’ ಭವನದಲ್ಲಿ ಗುರುವಾರ ನಡೆದ ಶಿಕ್ಷಕರ ದಿನ ಹಾಗೂ ರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಈ ಹಣ ವಿನಿಯೋಗಿಸುವ ಉದ್ದೇಶಕ್ಕೆ ನನ್ನ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ’ ಎಂದರು.

‘ರಾಜಕಾರಣಿಗಳನ್ನು ಜನರು ಬೇಗ ಮರೆಯುತ್ತಾರೆ. ಆದರೆ, ತಮ್ಮ ಗುರುಗಳನ್ನು ಬೇಗ ಮರೆಯುವುದಿಲ್ಲ. ನಾವು ನಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಶಿಕ್ಷಕರನ್ನು ಮರೆಯುವುದಿಲ್ಲ. ಶಿಕ್ಷಕರ ಮೇಲೆ ವಿಶೇಷ ನಂಬಿಕೆ ವಿಶ್ವಾಸ ಇರುತ್ತದೆ. ಮಕ್ಕಳು ಮನೆಯಲ್ಲಿ ತಂದೆ ತಾಯಿ ಮಾತು ಕೇಳದಿದ್ದರೂ ಶಿಕ್ಷಕರು ಹೇಳಿದ್ದನ್ನು ಕೇಳುತ್ತಾರೆ’ ಎಂದರು.

ಸಾಧಕ ಶಿಕ್ಷಕರಿಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಎಂ.ವಿ. ರಾಜೀವ್ ಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT