ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Muda Scam | ರಾಜ್ಯಪಾಲರ ನಡೆ ವಿರುದ್ಧ ರಾಜ್ಯದಾದ್ಯಂತ ನಾಳೆ ಪ್ರತಿಭಟನೆ: ಡಿಕೆಶಿ

Published : 18 ಆಗಸ್ಟ್ 2024, 7:59 IST
Last Updated : 18 ಆಗಸ್ಟ್ 2024, 7:59 IST
ಫಾಲೋ ಮಾಡಿ
Comments

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ನಡೆಯ ವಿರುದ್ಧ ರಾಜ್ಯದಾದ್ಯಂತ ಸೋಮವಾರ (ಆ. 19) ಪ್ರತಿಭಟನೆ  ಹಮ್ಮಿಕೊಳ್ಳಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ’ ಎಂದರು.

‘ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿಯ ಪಾತ್ರ ಇಲ್ಲದಿದ್ದರೂ ಅದನ್ನು ಬೇಕಂತಲೇ ಎತ್ತಿ ಕಟ್ಟಲಾಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಇದರ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಪಕ್ಷದ ಮುಖಂಡರಿಗೆ ತಿಳಿಸಲಾಗಿದೆ. ಕಿಡಿಗೇಡಿಗಳು ಒಳನುಸುಳಿ ಗಲಭೆ ಎಬ್ಬಿಸಿ, ಕಲ್ಲು ಎಸೆಯಬಹುದು. ಈ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ನಮ್ಮದು ಗಾಂಧಿ ಮಾರ್ಗದ ಶಾಂತಿಯುತ ಪ್ರತಿಭಟನೆ’ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಪ್ರಶ್ನಿಸಿದಾಗ, ‘ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಬೆಳವಣಿಗೆಗಳು ಹಾಗೂ ಸಂದರ್ಭದ ಬಗ್ಗೆ ಅವರಿಗೆ ವಿವರಿಸಿದ್ದೇವೆ’ ಎಂದರು.

ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಕೇಳಿದಾಗ, ‘ಅದನ್ನು ಎಐಸಿಸಿ ನಿರ್ಧಾರ ಮಾಡುತ್ತದೆ’ ಎಂದರು.

ಗೇಟ್ ಅಳವಡಿಕೆ ಯಶಸ್ವಿ:

‘ತುಂಗಭದ್ರಾ ಅಣೆಕಟ್ಟಿನ ಗೇಟ್ ಅಳವಡಿಕೆ ಯಶಸ್ವಿಯಾಗಿ ನೆರವೇರಿದೆ. ಅವಘಡ ಸಂಭವಿಸಿದಾಗ ಕಾರಜೋಳ, ಬೊಮ್ಮಾಯಿ, ವಿಜಯೇಂದ್ರ, ಅಶೋಕ ಮತ್ತು ಕುಮಾರಸ್ವಾಮಿ ಸೇರಿದಂತೆ ಅನೇಕರು ಟೀಕೆ ಮಾಡಿದ್ದರು. ಅವರ ಟೀಕೆಗಳು ಸತ್ತು ಹೋದವು, ನಮ್ಮ ಕೆಲಸ ಮಾತ್ರ ಉಳಿಯಿತು. ಅದಕ್ಕೆ ನಾನು ಯಾವಾಗಲು ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ’ ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT