ಹುಬ್ಬಳ್ಳಿ: ‘ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ ಮತ್ತು ‘ಗ್ಯಾರಂಟಿ’ ಯೋಜನೆಗಳಿಂದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯವಾಗಿದೆ’ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು.

‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತು ಮಾಡಿದ್ದು ಪಕ್ಷದ ಹೈಕಮಾಂಡ್ ತೀರ್ಮಾನ’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಯಾರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದರೂ ಅವರ ಮೇಲೆ ಕ್ರಮಕೈಗೊಳ್ಳುವುದಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದಾವಣಗೆರೆ ಉಪ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಪಕ್ಷದ ಅಭ್ಯರ್ಥಿ ಗೆದ್ದಿದ್ದು, ಮುಸ್ಲಿಂ ಸಮುದಾಯದ ಮತಗಳು ಪಲ್ಲಟವಾಗಿವೆ. ಈ ಬಗ್ಗೆಯೂ ಪಕ್ಷಮಟ್ಟದಲ್ಲಿ ತನಿಖೆ ನಡೆಸುವುದಾಗಿ ಸಿಎಂ ಹೇಳಿದ್ದಾರೆ’ ಎಂದರು.

‘ದಾವಣಗೆರೆಯಲ್ಲಿ ಮತಯಂತ್ರಗಳ ಭದ್ರತಾ ಕೊಠಡಿಗಳ ಚಿಲಕ ಮುರಿದು ಬಾಗಿಲು ತೆರೆದಿದ್ದು ಅನುಮಾನಾಸ್ಪದವಾಗಿದೆ ಎಂದು ಎಸ್ಡಿಪಿಐ ನಾಯಕ ಅಫ್ಸರ್ ಕೊಡ್ಲಿಪೇಟೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಆ ಪಕ್ಷದ ಏಜೆಂಟ್ ಹಾಗೂ ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿಯೇ ಮತ ಎಣಿಕೆ ಮಾಡಲಾಗಿದೆ’ ಎಂದರು.

‘ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ದೊಡ್ಡ ಷಡ್ಯಂತ್ರವೇ ನಡೆದಿದೆ. ಮತ ಪತ್ರಗಳನ್ನು ತಿದ್ದಲಾಗಿದೆ. ಬಿಜೆಪಿಯವರು ಮತಕಳ್ಳರು. ಗೆಲ್ಲುವ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಸೋತವರನ್ನು ಗೆಲ್ಲಿಸಿದ್ದಾರೆ’ ಎಂದು ಆರೋಪಿಸಿದರು.

‘ವಿನಯ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದು, ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಯಾರು ಅಭ್ಯರ್ಥಿಯಾಗಲಿದ್ದಾರೆ’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆ ಘೋಷಣೆಯಾದ ನಂತರ ಅಭ್ಯರ್ಥಿ ಯಾರು ಎಂದು ಹೈಕಮಾಂಡ್ ನಿರ್ಣಯಿಸಲಿದೆ’ ಎಂದರು.

ಸದಾನಂದ ವಿ.ಡಂಗನವರ, ಚಂದ್ರಶೇಖರ ಜುಟ್ಟಲ್, ಅಲ್ತಾಫ್ ಕಿತ್ತೂರ, ಬಸವರಾಜ, ಸುನಿತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-24-1776726129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.