ಬೆಂಗಳೂರು: 'ಕಾಂಗ್ರೆಸ್ ಪಕ್ಷದ 'ಮತ ಕಳ್ಳತನ'ವನ್ನು ಸಿಎಂ ಸಿದ್ದರಾಮಯ್ಯ ಬಯಲು ಮಾಡಿದ್ದಾರೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

1991ರ ಲೋಕಸಭೆ ಚುನಾವಣೆಯಲ್ಲಿ 'ನನ್ನನ್ನು ಮೋಸದಿಂದ ಸೋಲಿಸಲಾಯಿತು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಶೋಕ, 'ಮತ ಕಳ್ಳತನ'ದ ಎಂಬ ಕಪೋಲಕಲ್ಪಿತ ನಾಟಕದ ಬಗ್ಗೆ ಸತ್ಯ ನುಡಿದಿದ್ದ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಅತ್ಯಂತ ಅಗೌರವವಾಗಿ ಸಂಪುಟದಿಂದ ವಜಾ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ, ಈಗ ಕಾಂಗ್ರೆಸ್ ಪಕ್ಷದ ಮೋಸವನ್ನು ಬಯಲು ಮಾಡಿರುವ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ, ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವ ಧೈರ್ಯ ಇದೆಯಾ?' ಎಂದು ಪ್ರಶ್ನಿಸಿದ್ದಾರೆ.

'ಕಾಂಗ್ರೆಸ್ ಪಕ್ಷದ ಪ್ರತಾಪ, ಶಿಸ್ತು ಕ್ರಮ ಏನಿದ್ದರೂ ದಲಿತ ನಾಯಕರ ಮೇಲೆ ಪ್ರಯೋಗ ಮಾಡಲು ಮಾತ್ರ ಸೀಮಿತವೇ' ಎಂದು ಅವರು ಟೀಕಿಸಿದ್ದಾರೆ.

'2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಮತ ಖರೀದಿ ಮೂಲಕ ಗೆದ್ದರು ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಈಗಾಗಲೇ ಬಯಲು ಮಾಡಿದ್ದಾರೆ' ಎಂದು ಅಶೋಕ ಉಲ್ಲೇಖಿಸಿದ್ದಾರೆ.

'ಪಂಚಾಯತ್ನಿಂದ ಪಾರ್ಲಿಮೆಂಟ್ವರೆಗೆ ಕಾಂಗ್ರೆಸ್ ಪಕ್ಷದ ಏಕಚಕ್ರಾಧಿಪತ್ಯ ಇದ್ದ ಕಾಲದಲ್ಲಿ, 'ಆಗೆಲ್ಲಾ ಇವಿಎಂ ಇರಲಿಲ್ಲ, ಒಬ್ರೋ ಇಬ್ರೋ ಕೂತ್ಕೊಂಡು ಒತ್ತು ಬುಡ್ರೋ ಅನ್ನೋರು' ಎಂದು ಕಾಂಗ್ರೆಸ್ ಪಕ್ಷ 60 ವರ್ಷ ಹೇಗೆ ಚುನಾವಣೆ ಗೆಲ್ಲುತ್ತಿತ್ತು ಎನ್ನುವುದನ್ನು ಗೃಹ ಸಚಿವ ಡಾ. ಪರಮೇಶ್ವರ ಅವರು ಲೀಲಾಜಾಲವಾಗಿ ವಿವರಿಸಿದ್ದಾರೆ' ಎಂದು ಅವರು ತಿಳಿಸಿದ್ದಾರೆ.

'ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮದ ಪಿತಾಮಹ ಯಾರಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮತ್ತು ನೆಹರೂ-ಗಾಂಧಿ ಕುಟುಂಬ. ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಅವರು ಮಾತನಾಡಿದರೆ ಅದು ಭೂತದ ಬಾಯಲ್ಲಿ ಭಗವದ್ಗೀತೆ ನುಡಿದಂತೆ' ಎಂದು ವಾಗ್ದಾಳಿ ನಡೆಸಿದ್ದಾರೆ.
.VIDEO | 1991ರ ಲೋಕಸಭೆ ಚುನಾವಣೆಯಲ್ಲಿ ಮೋಸದಿಂದ ಸೋಲಿಸಿದರು: ಸಿದ್ದರಾಮಯ್ಯ.ಅವರು ಏನು ಬೇಕಾದರೂ ಮಾಡಬಹುದು: ಡಿಕೆಶಿ ವಿರುದ್ಧ ರಾಜಣ್ಣ ವಾಗ್ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.