ರಾಜ್ಯದಲ್ಲಿ ವಿವಿಧ ಭಾಷೆಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಬಿರುಸಿನ ಚರ್ಚೆ ನಡೆದಿರುವ ಬೆನ್ನಲ್ಲೇ, ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ವಾಕ್ಸಮರ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.