ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹94.73 ಕೋಟಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿಯನ್ನಾಗಿಸಲು ಜಾರಿ ನಿರ್ದೇಶನಾಲಯ ಒತ್ತಡ ಹೇರುತ್ತಿದೆ ಎಂಬ ಕಾಂಗ್ರೆಸ್ ಆರೋಪ ಮಂಗಳವಾರ ವಿಧಾನ ಪರಿಷತ್ನಲ್ಲೂ ಪ್ರತಿಧ್ವನಿಸಿತು.

ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ನ ಯು.ಬಿ. ವೆಂಕಟೇಶ್, ‘ಹಣ ವರ್ಗಾವಣೆಗೆ ಮುಖ್ಯಮಂತ್ರಿ (ಸಿದ್ದರಾಮಯ್ಯ), ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಹಣಕಾಸು ಇಲಾಖೆ (ಎಫ್.ಡಿ) ಸೂಚನೆ ಇತ್ತು ಎಂಬುದಾಗಿ ಒಪ್ಪಿಕೊಳ್ಳಬೇಕು. ಆಗ ನಿಮಗೆ ಸಹಾಯ ಮಾಡುತ್ತೇವೆ. ಇಲ್ಲದಿದ್ದರೆ ಬಂಧಿಸುತ್ತೇವೆ ಎಂದು ಇ.ಡಿ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ’ ಎಂದು ನಿಗಮದ ಹಿಂದಿನ ನಿರ್ದೇಶಕ ಕಲ್ಲೇಶ್ ಬಿ. ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ವಿರುದ್ಧ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದೊಂದು ಗಂಭೀರ ಆರೋಪ. ರಾಜ್ಯದ ಜನರಿಂದ ಚುನಾಯಿತವಾದ ಸರ್ಕಾರ ಕೆಡವಲು ಇ.ಡಿ ಬಳಸಿಕೊಂಡು ಮಾಡಿರುವ ಸಂಚು. ಹಾಗಾಗಿ, ಸದನದಲ್ಲಿ ಈ ಕುರಿತು ಚರ್ಚಿಸಲು ಅವಕಾಶ ಮಾಡಿಕೊಡಬೇಕು. ಇ.ಡಿ ಬಹಿಷ್ಕರಿಸುವ ಕುರಿತು ನಿರ್ಣಯ ಅಂಗೀಕರಿಸಬೇಕು ಎಂದು ಪಟ್ಟು ಹಿಡಿದರು.

ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಕಾಂಗ್ರೆಸ್ನ ಅಬ್ದುಲ್ ಜಬ್ಬಾರ್, ಪ್ರಕಾಶ್ ರಾಥೋಡ್, ಎಂ.ಆರ್. ಸೀತಾರಾಮ್ ಮತ್ತಿತರರು ದ್ವನಿಗೂಡಿಸಿದರು. ಕಾಂಗ್ರೆಸ್ ಸದಸ್ಯರ ಬೇಡಿಕೆಗೆ ಬಿಜೆಪಿ–ಜೆಡಿಎಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಪರ–ವಿರುದ್ಧ ವಾಗ್ವಾದ ನಡೆಯಿತು. ಹೀಗಾಗಿ, ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಎರಡು ಬಾರಿ ಮುಂದೂಡಬೇಕಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.