ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದೇ ಸಿದ್ದರಾಮಯ್ಯ ಅವರ ಶೂಗಳನ್ನು ತೆಗೆದ ಕಾರ್ಯಕರ್ತ!

Published : 2 ಅಕ್ಟೋಬರ್ 2024, 10:32 IST
Last Updated : 2 ಅಕ್ಟೋಬರ್ 2024, 10:32 IST
ಫಾಲೋ ಮಾಡಿ
Comments

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶೂಗಳನ್ನು ತೆಗೆದಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಹಲವರು ಆಕ್ಷೇಪ ಹೊರಹಾಕಿದ್ದಾರೆ.

ಮಹಾತ್ಮ ಗಾಂಧಿಯವರ 155ನೇ ಜನ್ಮದಿನದ ಪ್ರಯುಕ್ತ ಅವರಿಗೆ ಗೌರವ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕೂಡಲೇ ಸ್ಥಳದಲ್ಲಿದ್ದವರು ಕಾರ್ಯಕರ್ತನ ಕೈಯಲ್ಲಿದ್ದ ಧ್ವಜವನ್ನು ತೆಗೆದುಕೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಳುಕು ಹಾಕಿಕೊಂಡಿರುವ ಬೆನ್ನಲ್ಲೇ ಈ ಘಟನೆ ನಡೆದಿರುವುದು ರಾಜಕೀಯ ಕೆಸರೆರೆಚಾಟಕ್ಕೂ ಕಾರಣವಾಗಿದೆ.

ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಪಾರ್ವತಿ ಅವರಿಂದ ಮುಡಾ ನಿವೇಶನ ‌ಮರಳಿಸುವ ಮೂಲಕ ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT