ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ವಿರುದ್ಧ ಎಚ್‌ಡಿಡಿ–ಎಚ್‌ಡಿಕೆ ಪಿತೂರಿ: ಕೆ.ಎಂ.ರಾಮಚಂದ್ರಪ್ಪ

Published : 20 ಆಗಸ್ಟ್ 2024, 14:20 IST
Last Updated : 20 ಆಗಸ್ಟ್ 2024, 14:20 IST
ಫಾಲೋ ಮಾಡಿ
Comments

ಬೆಂಗಳೂರು: ‘ಜಾತ್ಯತೀತರು ಎಂದು ಹೇಳಿಕೊಳ್ಳುವ ಆದರೆ, ಕಡು ಜಾತಿವಾದಿಗಳಾದ ಎಚ್‌.ಡಿ.ದೇವೇಗೌಡರು ಮತ್ತು ಎಚ್‌.ಡಿ.ಕುಮಾರಸ್ವಾಮಿ ದೆಹಲಿಗೆ ಹೋಗಿ, ಸಿದ್ದರಾಮಯ್ಯ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ’ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ ಆರೋಪಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ನಾಯಕರು ಅಧಿಕಾರದಲ್ಲಿ ಇರುವುದನ್ನು ಸಹಿಸಿಕೊಳ್ಳಲು ಈ ತಂದೆ–ಮಕ್ಕಳಿಗೆ ಆಗುವುದಿಲ್ಲ. ಹೀಗಾಗಿಯೇ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸಿದ್ದರಾಮಯ್ಯ ವಿರುದ್ಧ ಸಂಚು ರೂಪಿಸಿದ್ದಾರೆ. ಇವರ ಕುಯುಕ್ತಿಯ ಕಾರಣದಿಂದಲೇ ಕೇಂದ್ರ ಸರ್ಕಾರ, ರಾಜ್ಯಪಾಲರನ್ನು ರಾಜ್ಯ ಸರ್ಕಾರದ ವಿರುದ್ಧ ಬಳಸಿಕೊಳ್ಳುತ್ತಿದೆ’ ಎಂದು ಆಪಾದಿಸಿದರು.

ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ‘ಅಕ್ರಮ ಮಾಡಿದ್ದಾರೆ ಎಂದು ಸುಳ್ಳನ್ನು ನೂರು ಬಾರಿ ಹೇಳಿ ನಿಜ ಮಾಡಲು ಹೊರಟಿದ್ದಾರೆ. ಆರ್‌ಎಸ್‌ಎಸ್‌ ಎಂಬ ಸುಳ್ಳುಗಾರರ ಸಂಘ, ಬಿಜೆಪಿ ಮತ್ತು ಪಾಳೆಗಾರಿಕೆ ರಾಜಕಾರಣವನ್ನೇ ಉಸಿರಾಡುತ್ತಿರುವ ಜೆಡಿಎಸ್‌ ಇದಕ್ಕಾಗಿ ಒಟ್ಟಾಗಿವೆ. ಆದರೆ, ಇದಕ್ಕೆ ನಾವು ಅವಕಾಶ ನೀಡುವುದಿಲ್ಲ’ ಎಂದರು.

‘ದಲಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ. ಇದನ್ನು ಖಂಡಿಸಿ ಇದೇ 27ಕ್ಕೆ ಸ್ವಾತಂತ್ರ್ಯ ಉದ್ಯಾನದಿಂದ ಮೆರವಣಿಗೆ ಹೊರಟು, ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT