ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿ, ಅಂದಿನ ವಿರೋಧ ಪಕ್ಷಕ್ಕೆ ಪ್ರಮುಖ ಅಸ್ತ್ರವಾಗಿದ್ದ ಗುತ್ತಿಗೆ ಹಾಗೂ ಬಿಲ್ ಪಾವತಿಗೆ ‘ಕಮಿಷನ್’ ಆರೋಪ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮತ್ತೆ ಪ್ರತಿಧ್ವನಿಸಿದೆ.

‘ಬಿಜೆಪಿ ಸರ್ಕಾರವನ್ನು ಶೇ 40ರ ಕಮಿಷನ್ ಸರ್ಕಾರ’ ಎಂದು ಜರೆದಿದ್ದ ಕಾಂಗ್ರೆಸ್ ನಾಯಕರು, ರಾಜ್ಯದಾದ್ಯಂತ ಆಂದೋಲನವನ್ನೇ ನಡೆಸಿದ್ದರು. ಇದು, ಆ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ ವರವಾಗಿ ಪರಿಣಮಿಸಿತ್ತು. ಈಗ ಗುತ್ತಿಗೆದಾರರ ಸಂಘ ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಹಲವು ಆರೋಪಗಳನ್ನು ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರಿಗೆ ಏಪ್ರಿಲ್ 3ರಂದು ಪತ್ರ ಬರೆದಿರುವ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ ಅವರು ‘ಕಾಣದ ಕೈಗಳು ಕೆಲಸ ಮಾಡುತ್ತಿವೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಲೋಕೋಪಯೋಗಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಗಳಲ್ಲಿ ಜ್ಯೇಷ್ಠತೆ ಉಲ್ಲಂಘಿಸಿ ಬಲಾಢ್ಯ ಗುತ್ತಿಗೆದಾರರಿಗಷ್ಟೇ ಬಿಲ್ ಪಾವತಿಸಲಾಗುತ್ತಿದೆ. ‘ಹಣ ಭರವಸೆ ಪತ್ರ’ (ಎಲ್ಒಸಿ) ವಿತರಣೆಯಲ್ಲಿ ಮಧ್ಯವರ್ತಿಗಳ ಹಾವಳಿ ಅತಿಯಾಗಿದೆ ಎಂದು ಸಂಘ ಆರೋಪಿಸಿದೆ.

‘ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ₹5ರಿಂದ ₹50 ಲಕ್ಷದವರೆಗಿನ ಬಿಲ್ಗಳನ್ನು ಜ್ಯೇಷ್ಠತೆ ಆಧಾರದಲ್ಲಿ ಪಾವತಿಸಲು ಹಣ ಬಿಡುಗಡೆ ಮಾಡದೆ, ‘ಸ್ಪೆಷಲ್ ಎಲ್ಒಸಿ’ ನೆಪದಲ್ಲಿ ಬಲಾಢ್ಯ ಗುತ್ತಿಗೆದಾರರಿಗೆ ವಿತರಿಸಲಾಗುತ್ತಿದೆ. ಇಲಾಖೆಗಳಲ್ಲಿ ಹಿಡಿತ ಸಾಧಿಸಿರುವ ‘ಕಾಣದ ಕೈಗಳು’ (ಮಧ್ಯವರ್ತಿಗಳು) ವ್ಯವಸ್ಥೆಯನ್ನು ಹದಗೆಡಿಸುತ್ತಿದ್ದಾರೆ’ ಎಂದು ಸಂಘ ದೂರಿದೆ.

‘ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ, ನಮ್ಮ ಪದಾಧಿಕಾರಿಗಳೊಂದಿಗೂ ಚರ್ಚಿಸಿ, ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

‘ಮಾರ್ಚ್ 3ರಂದು ತಮ್ಮ ಭೇಟಿಯ ಸಂದರ್ಭದಲ್ಲಿ ಬಾಕಿ ಬಿಲ್ಗಳಲ್ಲಿ ಶೇ 50ರಷ್ಟು ಮೊತ್ತವನ್ನು ಬಿಡುಗಡೆ ಮಾಡಲಾಗುವುದು. ಎಲ್ಲ ಇಲಾಖೆಯ ಸುಮಾರು ₹15 ಸಾವಿರ ಕೋಟಿಯನ್ನು ಏಪ್ರಿಲ್ನಲ್ಲಿ ಬಿಡುಗಡೆ ಮಾಡುವ ಭರವಸೆ ನೀಡಿದ್ದೀರಿ. ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಲಾಗಿದೆ.

‘ಮೂರು–ನಾಲ್ಕು ತಿಂಗಳಿನಿಂದ ಅವ್ಯವಸ್ಥೆ’: ಈ ಮೂರೂ ಇಲಾಖೆಗಳಲ್ಲಿ ಮೂರು– ನಾಲ್ಕು ತಿಂಗಳಿನಿಂದ ‘ಕಾಣದ ಕೈಗಳು’ ವ್ಯವಸ್ಥೆಯನ್ನು ಹದಗೆಡಿಸುತ್ತಿವೆ ಎಂಬ ದೂರು ಪತ್ರಗಳಲ್ಲಿದೆ.

‘ಲೋಕೋಪಯೋಗಿ ಇಲಾಖೆಯಲ್ಲಿ ಎಲ್ಒಸಿ ಬಿಡುಗಡೆಯಲ್ಲಿ ‘ಜ್ಯೇಷ್ಠತೆ ಮತ್ತು ಪಾವಿತ್ರ್ಯ’ ಕಾಯ್ದುಕೊಂಡು ಬರಲಾಗಿತ್ತು. ಮೂರ್ನಾಲ್ಕು ತಿಂಗಳಿನಿಂದ ‘ಕಾಣದ ಕೈಗಳು’ ವ್ಯವಸ್ಥೆಯನ್ನು ಹದಗೆಡಿಸುತ್ತಿದ್ದಾರೆ. ಜ್ಯೇಷ್ಠತೆ ಉಲ್ಲಂಘಿಸಿ ಬಲಾಢ್ಯ ಗುತ್ತಿಗೆದಾರರಿಗೆ ಆದ್ಯತೆ ಮೇರೆಗೆ ಬಿಲ್ ಪಾವತಿಸಲಾಗುತ್ತಿದೆ’ ಎಂದು ಗುತ್ತಿಗೆದಾರರ ಸಂಘವು ಪತ್ರದಲ್ಲಿ ದೂರಿದೆ.

‘ಲೋಕೋಪಯೋಗಿ ಇಲಾಖೆಯಲ್ಲಿ 26 ಲೆಕ್ಕ ಶೀರ್ಷಿಕೆಗಳಡಿ ಕಾಮಗಾರಿ ನಡೆಸಲಾಗಿದ್ದರೂ ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಮತ್ತು ಅಪೆಂಡಿಕ್ಸ್–ಇ ಕಾಮಗಾರಿಗಳಿಗೆ ಹೆಚ್ಚಿನ ನಿಗಾವಹಿಸಿ, ಹಣ ಬಿಡುಗಡೆ ಮಾಡಲಾಗಿದೆ. ಬಾಕಿ ಲೆಕ್ಕ ಶೀರ್ಷಿಕೆಗಳಡಿಯಲ್ಲಿ ಕಾಮಗಾರಿ ನಡೆಸಿರುವ ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಇವರ ಪಟ್ಟಿಯನ್ನು ನಿಮ್ಮ ವಿಶೇಷ ಅಧಿಕಾರಿಗೆ ಕಳುಹಿಸಲಾಗಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಅವರಿಗೆ ಬರೆದಿರುವ ಪತ್ರದಲ್ಲಿ ದೂರಲಾಗಿದೆ.

ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಮತ್ತು ಆಂತರಿಕ ಆರ್ಥಿಕ ಸಲಹೆಗಾರರ ಬಳಿ ಸಮಸ್ಯೆಯನ್ನು ಹೇಳಿದರೆ ಪರಿಹಾರ ಸಿಗುತ್ತಿಲ್ಲ. ಯಾರೂ ಮೊದಲಿನಂತೆ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂಬ ಉಲ್ಲೇಖ ಪತ್ರದಲ್ಲಿದೆ.

ಜಲ ಸಂಪನ್ಮೂಲ ಇಲಾಖೆಯಲ್ಲಿನ ಬಿಲ್ ಪಾವತಿ ಕುರಿತ ದೂರುಗಳಿಗೆ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸ್ಪಂದಿಸುತ್ತಿಲ್ಲ. ದೂರವಾಣಿ ಕರೆಗಳಿಗೂ ಉತ್ತರಿಸುತ್ತಿಲ್ಲ. ಸಣ್ಣ ನೀರಾವರಿ ಇಲಾಖೆಯಲ್ಲಿ ಚೆಕ್ ಡ್ಯಾಂ ಕಾಮಗಾರಿಗಳಿಗೆ ಶೇಕಡ 5ರಿಂದ 10ರಷ್ಟು ಹಣ ಮಾತ್ರ ಬಿಡುಗಡೆ ಮಾಡಲಾಗುತ್ತಿದೆ ಎಂ ದೂರು ಪತ್ರಗಳಲ್ಲಿದೆ.

ಸಂಬಂಧಿಕರ ಕೈವಾಡ: ಆರ್. ಮಂಜುನಾಥ್

‘ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲು ಸಚಿವರ ಸಭೆಯಲ್ಲಿ ಕೈಗೊಂಡಿರುವ ನಿರ್ಧಾರವನ್ನೂ ‘ಕಾಣದ ಕೈಗಳು’ (ಸಚಿವರ ಸಂಬಂಧಿಕರು) ಬದಲಿಸುತ್ತಿದ್ದಾರೆ. ಹೀಗಾಗಿ ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಹಣ ಬಿಡುಗಡೆಯಾಗದೆ ಸಂಕಷ್ಟದಲ್ಲಿದ್ದಾರೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ದೂರಿದರು. ‘ಜ್ಯೇಷ್ಠತೆ ಆಧಾರದಲ್ಲಿ ಬಿಲ್ ಬಿಡುಗಡೆ ಮಾಡುತ್ತಿಲ್ಲ. ಸಚಿವರ ವಿವೇಚನಾ ಅಧಿಕಾರ ಬಳಸಿ ಶೇ 20ರಷ್ಟು ಮೊತ್ತವನ್ನು ಮಾತ್ರ ‘ಸ್ಪೆಷಲ್ ಎಲ್ಒಸಿ’ ನೀಡಬಹುದು. ಆದರೆ ಅದಕ್ಕೇ ಹೆಚ್ಚು ಒತ್ತು ನೀಡಿ ಸಾಮಾನ್ಯ ವರ್ಗದ ಬಿಲ್ಗಳನ್ನು ಪಾವತಿಸುತ್ತಿಲ್ಲ. ಮೂರು ವರ್ಷಗಳಿಂದ ಬಿಲ್ಗಳು ಬಾಕಿ ಇದ್ದು ಅದರ ಬಿಡುಗಡೆಗೆ ಹೆಚ್ಚಿನ ಕಮಿಷನ್ ಕೂಡ ನೀಡಬೇಕಾಗಿದೆ’ ಎಂದು ಆರೋಪಿಸಿದರು.

‘ಲೋಕಾಯುಕ್ತಕ್ಕೊ ಪೊಲೀಸರಿಗೊ ದೂರು ನೀಡಲಿ’

‘ಎಲ್ಒಸಿಗೆ ಕಮಿಷನ್ ಕೇಳುತ್ತಿರುವವರ ಬಗ್ಗೆ ಗುತ್ತಿಗೆದಾರರ ಸಂಘದವರು ಲೋಕಾಯುಕ್ತಕ್ಕೊ ಪೊಲೀಸರಿಗೊ ದೂರು ನೀಡಲಿ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಮ್ಮ ಸರ್ಕಾರ ನ್ಯಾಯಬದ್ಧವಾಗಿ ಆಡಳಿತ ನೀಡುತ್ತಿದೆ. ನಾವು ಯಾವುದೇ ಲಂಚಕ್ಕೆ ಪ್ರೋತ್ಸಾಹ ನೀಡುವವರಲ್ಲ. ನನ್ನ ಇಲಾಖೆಯ ಮೇಲೆ ಆರೋಪ ಇದ್ದರೂ ಸರಿ ಅವರು ಲಿಖಿತವಾಗಿ ದೂರು ಕೊಟ್ಟರೆ ತನಿಖೆ ಮಾಡಿಸೋಣ’ ಎಂದರು. ‘ಯಾವ ವಿಶೇಷ ಎಲ್ಒಸಿಯೂ ಇಲ್ಲ. ಏನೂ ಇಲ್ಲ. ನಾವು ಶೇ 10-20ರಷ್ಟು ಬಿಲ್ ಬಿಡುಗಡೆ ಮಾಡಿರುತ್ತೇವೆ’ ಎಂದರು.

‘ಬಿಲ್ ಪಾವತಿಯಲ್ಲಿ ಹಸ್ತಕ್ಷೇಪ ಇಲ್ಲ’

‘ಕಾಮಗಾರಿಗಳ ಬಿಲ್ ಪಾವತಿಯಲ್ಲಿ ಕುಟುಂಬದ ಸದಸ್ಯರ ಹಸ್ತಕ್ಷೇಪ ಇಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಾಕಿ ಬಿಲ್ಗಳ ಪಾವತಿಗೆ ಶಿಫಾರಸುಗಳು ಸಾಮಾನ್ಯವಾಗಿ ಬರುತ್ತವೆ. ಅದನ್ನು ಇಲಾಖೆ ಪರಿಗಣಿಸುತ್ತದೆ. ವಿಶೇಷವಾಗಿ ಶೇ 20ರಷ್ಟು ಬಿಲ್ ಪಾವತಿಗೆ ಮೊದಲಿನಿಂದಲೂ ಅವಕಾಶವಿದೆ. ಉಳಿದಂತೆ ಜ್ಯೇಷ್ಠತೆ ಆಧಾರದಲ್ಲಿ ಹಣ ಬಿಡುಗಡೆಯಾಗುತ್ತದೆ’ ಎಂದರು.

‘ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆಯುವ ಪ್ರಕ್ರಿಯೆಗಳ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನನ್ನ ಇಲಾಖೆಗೆ ಸಂಬಂಧಪಟ್ಟಂತೆ ಗುತ್ತಿಗೆದಾರರ ಸಂಘವು ಈ ಮೊದಲು ನೀಡಿದ್ದ ಸಲಹೆಗಳನ್ನು ಆಧರಿಸಿ ಕ್ರಮ ಕೈಗೊಂಡಿದ್ದೇನೆ. ಯಾವುದೇ ಸಲಹೆ ನೀಡಿದರೆ ಅದನ್ನು ಪರಿಗಣಿಸುತ್ತೇನೆ. ರಾಜಕಾರಣ ಎಂದ ಮೇಲೆ ಶಾಸಕರು ಪಕ್ಷದ ಕಾರ್ಯಕರ್ತರು ಶಿಫಾರಸು ನೀಡುವುದು ಸಹಜ. ಅದರಲ್ಲಿ ತಪ್ಪಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.