ಬೆಂಗಳೂರು: ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಕಾಯ್ದೆ-2025 ಅನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ, ‘ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ’ದ ಅಧ್ಯಕ್ಷ ಜಿ.ನಂಜನಗೌಡ ಹಾಗೂ ಇದರ ಸದಸ್ಯ ಸಂಸ್ಥೆಗಳಾಗಿರುವ ರಾಜ್ಯದ ವಿವಿಧ 12 ಸೌಹಾರ್ದ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾನೂನು ಇಲಾಖೆ, ಸಹಕಾರ ಇಲಾಖೆ ಹಾಗೂ ಸಹಕಾರ ಸಂಘಗಳ ನಿಬಂಧಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

‘ಸರ್ಕಾರ ಸೇರಿದಂತೆ ಇತರ ಪ್ರತಿವಾದಿಗಳು ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಒಂದೊಮ್ಮೆ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸದೇ ಇದ್ದ ಪಕ್ಷದಲ್ಲಿ ಕಾಯ್ದೆ ಜಾರಿಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ಪರಿಗಣಿಸಲಾಗುವುದು’ ಎಂದು ನ್ಯಾಯಪೀಠ ಹೇಳಿದೆ.

ಆಕ್ಷೇಪ ಏನು?: ‘ತಿದ್ದುಪಡಿ ಕಾಯ್ದೆಯು ಸಹಕಾರ ತತ್ವಕ್ಕೆ ವಿರುದ್ಧವಾಗಿದೆ. ಸೌಹಾರ್ದ ಸಹಕಾರಿ ಬ್ಯಾಂಕುಗಳು ತಮ್ಮ ಠೇವಣಿಯ ಶೇ 20ರಷ್ಟು ಮೊತ್ತವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕುಗಳಲ್ಲಿ ಇರಿಸಬೇಕು. ಬ್ಯಾಂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿ ವರ್ಷ ತಮ್ಮ ಆಸ್ತಿ ಘೋಷಿಸಬೇಕು ಎಂಬುದೂ ಸೇರಿದಂತೆ ವಿಧಿಸಲಾಗಿರುವ ಷರತ್ತುಗಳು ಸಹಕಾರ ಸಂಘಗಳ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಿವೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

‘ತಿದ್ದುಪಡಿಯು ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವತಂತ್ರ ನಿರ್ವಹಣೆಗೆ ಅಡ್ಡಿ ಉಂಟು ಮಾಡಲಿದ್ದು, 2025ರ ಸೆಪ್ಟೆಂಬರ್ 12ರಂದು ಜಾರಿಗೆ ಬಂದಿರುವ ತಿದ್ದುಪಡಿ ಕಾಯ್ದೆಯನ್ನು ಸಂವಿಧಾನ ಬಾಹಿರ ಎಂದು ಘೋಷಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.