ಬೆಂಗಳೂರು: ಕರ್ನಾಟಕ ಸಹಕಾರ ರತ್ನ ಪ್ರಶಸ್ತಿಯನ್ನು ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ 72ನೇ ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಗಿದೆ.

ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದ ಸಿದ್ದರಾಮಯ್ಯ, ‘ರಾಜ್ಯೋತ್ಸವ ಪ್ರಶಸ್ತಿಯನ್ನು ಮೊದಲು ನೂರಕ್ಕೂ ಹೆಚ್ಚು ಜನರಿಗೆ ನೀಡಲಾಗುತ್ತಿತ್ತು. ಈಗ ಎಷ್ಟನೆ ವರ್ಷದ ಆಚರಣೆ ಮಾಡಲಾಗುತ್ತಿದೆಯೋ, ಅಷ್ಟೇ ಪ್ರಶಸ್ತಿ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಬಹುದು. ಜಿಲ್ಲೆಗೆ ಒಂದರಂತೆ ಹಾಗೂ ಬೆಂಗಳೂರಿಗೆ ಐದು ಪ್ರಶಸ್ತಿಗಳನ್ನು ನೀಡಬಹುದು ಎನ್ನುವ ಕುರಿತು ಸಲಹೆ ನೀಡಲಾಗಿದೆ. ಪ್ರಶಸ್ತಿಗೆ ಹೆಸರು ಸೂಚಿಸುವ ಜವಾಬ್ದಾರಿಯನ್ನು ನನಗೇ ಕೊಟ್ಟಿದ್ದಾರೆ. ಸಹಕಾರ ಮಹಾ ಮಂಡಳದ ಅಧ್ಯಕ್ಷರು, ಸಮಿತಿ ಜತೆ ಚರ್ಚಿಸಿ, ಆಯ್ಕೆ ಮಾಡಲಾಗುವುದು’ ಎಂದರು.

‘ಸಹಕಾರ ಕ್ಷೇತ್ರ ರಾಜ್ಯದ ವ್ಯಾಪ್ತಿಗೆ ಬರುವ ವಿಚಾರ. ಕೇಂದ್ರದ ವ್ಯಾಪ್ತಿಗೆ ಬರುವುದಿಲ್ಲ. ರಾಜ್ಯ ಸರ್ಕಾರಗಳು ತೆಗೆದುಕೊಳ್ಳುವ ನಿರ್ಧಾರದ ಮೇಲೆ ಸಹಕಾರ ಕ್ಷೇತ್ರದ ಪ್ರಗತಿ ನಿಂತಿರುತ್ತದೆ. ಹಾಗಾಗಿ, ಸಹಕಾರ ಸಪ್ತಾಹದ ಘೋಷವಾಕ್ಯಗಳನ್ನು ಕೇಂದ್ರದ ಬದಲಿಗೆ ಆಯಾ ರಾಜ್ಯಗಳೇ ಘೋಷಿಸಬೇಕು’ ಎಂದು ಅಭಿಪ್ರಾಯಪಟ್ಟರು.

ಸಚಿವ ಎಚ್.ಕೆ.ಪಾಟೀಲ, ಮಾಜಿ ಸಚಿವ ಕೆ.ಎನ್.ರಾಜಣ್ಣ, ಶಾಸಕರಾದ ಎಸ್.ಟಿ.ಸೋಮಶೇಖರ್, ವೆಂಕಟೇಶ್, ರಾಘವೇಂದ್ರ ಹಿಟ್ನಾಳ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಉಪಸ್ಥಿತರಿದ್ದರು.

ಸಹಕಾರ ಸಪ್ತಾಹ: ನ.14ಕ್ಕೆ ಉದ್ಘಾಟನೆ

ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸಲು ನ.14ರಂದು ಜವಾಹರಲಾಲ್ ನೆಹರೂ ಅವರ ಜಯಂತಿ ದಿನವೇ 72ನೇ ಸಹಕಾರ ಸಪ್ತಾಹ ಉದ್ಘಾಟಿಸಲಾಗುವುದು. ಅರಮನೆ ಮೈದಾನದಲ್ಲಿ ಸಪ್ತಾಹದ ಉದ್ಘಾಟನೆ ನಡೆಯಲಿದೆ. ಅಂದೇ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲೂ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನ. 20 ರಂದು ಚಾಮರಾಜನಗರದಲ್ಲಿ ಸಮಾರೋಪ ಇರುತ್ತದೆ’ ಎಂದು ಮಾಹಿತಿ ನೀಡಿದರು.