ಬೆಂಗಳೂರು: ಕೆಲವರು ಕ್ವಾರಂಟೈನ್ ಉಲ್ಲಂಘನೆ ಮಾಡುತ್ತಿದ್ದು, ಅಂತಹವರಿಗೆ ನೋಟಿಸ್ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ವಾರಂಟೈನ್‌ಗೆ ಒಳಗಾದವರನ್ನು ಸಂಪೂರ್ಣವಾಗಿ ಗುರುತಿಸುವ ಕೆಲಸ ಮುಂದುವರೆದಿದೆ. ಉಲ್ಲಂಘಿಸುವವರಿಗೆ ನೋಟಿಸ್ ನೀಡಲಾಗುವುದು. ಕ್ವಾರಂಟೈನ್ ಎಲ್ಲಿಂದ ಎಲ್ಲಿಯವರೆ ಇರುತ್ತದೆ ಎಂದು ನೋಟೀಸ್‌ನಲ್ಲಿ ಇರುತ್ತದೆ. 9 ಜಿಲ್ಲೆಗಳಲ್ಲಿ ಸೆಕ್ಷನ್ಮುಂದುವರಿಲಿದೆ’ ಎಂದು ಹೇಳಿದರು.

ಖಾಸಗಿ ಬಸ್, ಟ್ಯಾಕ್ಸಿಗಳ ಓಡಾಟ ನಿಷೇಧಿಸಬೇಕೇ ಎಂಬ ಬಗ್ಗೆ ಸಂಜೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದರು.

9 ಜಿಲ್ಲೆಗಳಲ್ಲಿ ವಾಣಿಜ್ಯ ವ್ಯವಹಾರ ಇರುವುದಿಲ್ಲ. ನಿತ್ಯದ ಅವಶ್ಯಕತೆಗಳ ಮಾರಾಟಕ್ಕೆ ಮಾತ್ರ ಅವಕಾಶ ಎಂದು ಸಚಿವರು ಹೇಳಿದರು.

ಕೈದಿಗಳು ಜೈಲಿನ ಒಳಗೆ ಕ್ವಾರಂಟೈನ್‌ಗೆ ಒಳಗಾಗುತ್ತಿದ್ದಾರೆ. ಹೊಸ ಕೈದಿಗಳಿಗೆ ಪೂರ್ತಿ ಪ್ರಮಾಣದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತದೆ ಎಂದೂ ಅವರು ತಿಳಿಸಿದರು.

ಕೈದಿಗಳು ನಿತ್ಯ 5 ಸಾವಿರ ಮಾಸ್ಕ್ ತಯಾರಿಸುತ್ತಿದ್ದಾರೆ. ಈಗಾಗಲೇ 17 ಸಾವಿರ ಮಾಸ್ಕ್ ನೀಡಿದ್ದಾರೆ. ಇನ್ನು ಒಂದು ವಾರ ಇಲಾಖೆಗೆ ಅಗತ್ಯವಿರುವ ಮಾಸ್ಕ್ ತಯಾರು ಮಾಡಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.