ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 2,523 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 1,192 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 1,623 ಹೊಸ ಪ್ರಕರಣಗಳು ವರದಿಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಬೀದರ್‌ನಲ್ಲಿ 78 ಪ್ರಕರಣಗಳು, ಕಲಬುರ್ಗಿಯಲ್ಲಿ 100 ಪ್ರಕರಣಗಳು, ಮೈಸೂರಿನಲ್ಲಿ 89, ಉಡುಪಿಯಲ್ಲಿ 145, ಹಾಸನದಲ್ಲಿ 48 ಹಾಗೂ ದಕ್ಷಿಣ ಕನ್ನಡದಲ್ಲಿ 72 ಪ್ರಕರಣಗಳು ದಾಖಲಾಗಿವೆ.

ಐಸಿಯುನಲ್ಲಿ 150 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 9,78,478 ಪ್ರಕರಣಗಳ ಪೈಕಿ 9,47,781 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಈವರೆಗೂ 12,471 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದು, ಪ್ರಸ್ತುತ 18,207 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಿಸಿದೆ.

ಇದನ್ನೂ ಓದಿ: ಬೆಂಗಳೂರಿಗೆ ಬರುವವರಿಗೆ 'ಆರ್ಟಿ–ಪಿಸಿಆರ್' ನೆಗೆಟಿವ್ ಕಡ್ಡಾಯ: ಕೆ.ಸುಧಾಕರ್

ಗುರುವಾರದ ವರೆಗೂ ರಾಜ್ಯದಲ್ಲಿ ಒಟ್ಟು 30,44,524 ಡೋಸ್‌ಗಳಷ್ಟು ಕೋವಿಡ್ ಲಸಿಕೆ ಹಾಕಲಾಗಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 6.22 ಲಕ್ಷ ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋವಿಡ್ ಸೋಂಕು ದೃಢಪಟ್ಟವರಿಗೆ ಮುದ್ರೆ: ಸಚಿವ ಸುಧಾಕರ್ ಸೂಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.