ಬೆಂಗಳೂರು: ತಜ್ಞರುಗಳ ಸಲಹೆಯನ್ನು ಸ್ವೀಕರಿಸಲಾಗಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿಗಳು ಉನ್ನತ ಮಟ್ಟದ ಮತ್ತೊಂದು ಸಭೆ ಕರೆದಿದ್ದಾರೆ. ಮುಂದಿನ ಮಾರ್ಗಸೂಚಿಗಳ ಕುರಿತಂತೆ ಸಧ್ಯದಲ್ಲೇ ಪ್ರಕಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಇಲ್ಲಿ ಬುಧವಾರ ನಡೆದ ತಜ್ಞರ ಸಭೆಯ ಬಳಿಕ ಮಾತನಾಡಿದ ಅವರು, ಬಳ್ಳಾರಿಯ ಘಟನೆ ಸಂಭವಿಸಿದ ದಿನದಂದೇ ಜಿಲ್ಲಾಡಳಿತದೊಂದಿಗೆ ಮಾತನಾಡಿದ್ದು ಅಲ್ಲಿನ ಜಿಲ್ಲಾಧಿಕಾರಿಯವರು ಈ ಘಟನೆಗಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ. ಈ ಘಟನೆಗೆ ಕಾರಣರಾದ 6 ಮಂದಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ, ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇದನ್ನೂ ಓದಿ: ವಿಡಿಯೊ ನೋಡಿ |ಚನ್ನಗಿರಿ: ಜೆಸಿಬಿಯಲ್ಲಿ ಕೊರೊನಾ ಸೋಂಕಿತ ಮಹಿಳೆಯ ಶವ ಸಾಗಾಟ

ಸಭೆಯಲ್ಲಿ ವಿವಿಧ ತಜ್ಞರುಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು. ರೋಗ ಲಕ್ಷಣ ಇಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಮ್ ಐಸೋಲೇಷನ್), ಅವರ ಆರೋಗ್ಯದ ಮೇಲೆ ನಿಗಾ ಇಡುವುದು ಸೂಕ್ತ. ಇದರಿಂದ ಆಸ್ಪತ್ರೆಗಳ ಮೇಲೆ ಒತ್ತಡ ತಡೆಯಬಹುದಾಗಿದೆ ಎಂದು ಬಹುತೇಕ ತಜ್ಞರು ಅಭಿಪ್ರಾಯಪಟ್ಟರು. ತೀವ್ರ ಸೋಂಕಿನ ಲಕ್ಷಣಗಳು ಹೊಂದಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು ಸೋಂಕಿತರಾದಲ್ಲಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಆದ್ಯತೆ ನೀಡಬೇಕು ಎಂದು ತಜ್ಞರು ಸಲಹೆ ಮಾಡಿದರು. ಅಲ್ಲದೆ ಟೆಲಿ ಮೆಡಿಸಿನ್ ಮೂಲಕ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಸಿಬ್ಬಂದಿ ಹಾಗೂ ಪರಿಕರಗಳ ಅವಶ್ಯಕತೆಯನ್ನೂ ಕೂಡ ವ್ಯಕ್ತಪಡಿಸಿದರು.

ಟೆಲಿ ಐಸಿಯು ಹಾಗೂ ಚಿಕಿತ್ಸೆಯ ನಿಗದಿತ ಮಾನದಂಡಗಳ ಕುರಿತು ಹೆಚ್ಚಿನ ತರಬೇತಿ ಅಗತ್ಯ. ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಸರಪಣಿ ಹಾಗೂ ಹೊಸ ಔಷಧಿಗಳ ಪೂರೈಕೆ ಸರಪಣಿ ಅಬಾಧಿತವಾಗಿರಬೇಕು.. ರಾಜ್ಯದಲ್ಲಿ ಕೋವಿಡ್ ಕುರಿತು ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗಬೇಕಿದೆ. ಇದಕ್ಕಾಗಿ ಮಾಧ್ಯಮಗಳು ಸರಿಯಾದ ರೀತಿಯಲ್ಲಿ ಸುದ್ದಿ ಬಿತ್ತರಿಸಬೇಕು ಎಂದು ಅವರುಗಳು ಮನವಿ ಮಾಡಿದರು.

ಇದನ್ನೂ ಓದಿ:ಕೋವಿಡ್ ನಿಯಂತ್ರಣ: ಕಡಿಮೆ ಜ್ವರಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡ, ತಜ್ಞರ ಸಲಹೆ

ತಜ್ಞರುಗಳ ಸಲಹೆಗಳನ್ನು ಸರ್ಕಾರ ಉನ್ನತಮಟ್ಟದಲ್ಲಿ ವಿವರವಾಗಿ ಚರ್ಚಿಸಿ ಕ್ರಮಕೈಗೊಳ್ಳುವುದೆಂದು ಸಚಿವ ಸುಧಾಕರ್ ತಿಳಿಸಿದರು. ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ ಭಾರತದ ಪ್ರತಿನಿಧಿ ಆಶಿಶ್ ಸತ್ಪತಿ, ಕಿ ಕಿಮ್ಸ್‌ನ ಡಾ.ಲೋಕೇಶ್, ಮಣಿಪಾಲ ಆಸ್ಪತ್ರೆಯ ಮುಖ್ಯಸ್ಥ ಡಾ.ಸುಧಾಕರನ್ ಬಲ್ಲಾಳ್, ಡಾ.ಅಂಜನಪ್ಪ, ಡಾ.ಶರಣ್ ಪಾಟೀಲ್, ಡಾ.ಪ್ರಭುದೇವ್, ಡಾ.ಪ್ರದೀಪ್ ರಂಗಪ್ಪ, ಡಾ.ಪ್ರಕಾಶ್, ಡಾ.ಕುಮಾರ್, ಡಾ.ಗಿರಿಧರ್ ಬಾಬು, ಡಾ.ಷರೀಫ್, ಡಾ.ರಂಗನಾಥ, ಡಾ.ಸತೀಶ್, ಡಾ.ಭುಜಂಗ ಶೆಟ್ಟಿ ಸೇರಿದಂತೆ ಅನೇಕ ತಜ್ಞರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.