ಬೆಂಗಳೂರು: ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಕೊರೊನಾ ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಸಿದ್ದರಾಮಯ್ಯ ಅವರು ತಾಲ್ಲೂಕು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

13 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಚ್ಚರ ವಹಿಸುವಂತೆ ಹಾಗೂ ಸೋಂಕು ಹರಡದಂತೆ ನೋಡಿಕೊಳ್ಳಲು ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲಾಧಿಕಾರಿಗಳು, ಬಾದಾಮಿ ತಹಸೀಲ್ದಾರ್, ತಾಲೂಕು ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ಮಾಸ್ಕ್, ಸ್ಯಾನಿಟೈಸರ್ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅವರು ಕ್ಷೇತ್ರದ ಜನರಲ್ಲಿಯೂ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.