ರಾಜ್ಯದಲ್ಲಿ ಮಂಗಳವಾರ 1,870 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.76 ಲಕ್ಷಕ್ಕೆ ಏರಿಕೆಯಾಗಿದೆ. ಈ ತಿಂಗಳು 24 ದಿನಗಳ ಅವಧಿಯಲ್ಲಿ 53,013 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 2,208 ಮಂದಿ ಸೋಂಕಿತರಾಗಿದ್ದಾರೆ. ಕೋವಿಡ್ ಪೀಡಿತರಲ್ಲಿ ಮತ್ತೆ 17 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,695ಕ್ಕೆ ಏರಿಕೆಯಾಗಿದೆ.