ಬೆಂಗಳೂರು: ಕೊರೊನಾ ವೈರಸ್ ಸೋಂಕು ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಭಾನುವಾರ ಸಚಿವರು, ಅಧಿಕಾರಿಗಳ ತುರ್ತು ಸಭೆ ನಡೆಸಿದರು. ಜೊತೆಗೆ, ಜನರ ಆರೋಗ್ಯ ರಕ್ಷಣೆಗೆ, ಈ ಬಿಕ್ಕಟ್ಟಿನ ಅವಧಿಯಲ್ಲಿ ಇತರ ಸಮಸ್ಯೆಗಳು ಉಂಟಾಗದಂತೆ ಕೆಲವು ಕಟ್ಟು ನಿಟ್ಟಿನ ಕ್ರಮಗಳನ್ನು ಘೋಷಿಸಿದ್ದಾರೆ.

ಖ್ಯಾತ ವೈದ್ಯ ಡಾ.. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್,ಸಚಿವರೊಂದಿಗೆ ತುರ್ತು ಸಭೆ ನಡೆಯಿತು.ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸಹ ಭಾಗವಹಿಸಿದ್ದರು.

ಸಭೆಯ ಪ್ರಮುಖ ತೀರ್ಮಾನಗಳು

1. ಮುಂದಿನ ಆದೇಶದ ವರೆಗೆ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಮತ್ತು ಇತರ ಎಲ್ಲ ಪರೀಕ್ಷೆಗಳ ಮುಂದೂಡಿಕೆ.

2. ರಾಜ್ಯದ ಎಲ್ಲಾ ಗಡಿ ಭಾಗ ಬಂದ್ ಮಾಡಲು ತೀರ್ಮಾನ

3. 1700 ಹಾಸಿಗೆಯ ವಿಕ್ಟೋರಿಯಾ ಆಸ್ಪತ್ರೆಯನ್ನು ಕೋವಿಡ್-19 ಚಿಕಿತ್ಸೆಗೆ ಮೀಸಲಿಡಲು ತೀರ್ಮಾನ

4. ಐಸಿಎಂಆರ್ ಮತ್ತು ಎನ್ಐವಿ ಸಹಕಾರದೊಂದಿಗೆ ಸರ್ಕಾರಿ ಮತ್ತು ಸರ್ಕಾರೇತರ ಆಸ್ಪತ್ರೆಗಳಿಗೂ ಕೋವಿಡ್ ತಪಾಸಣೆಗೆ ಪರವಾನಿಗೆ ಕೊಡಿಸಲು ಕ್ರಮ.

5. ಲ್ಯಾಬ್ ಟೆಸ್ಟ್‌ಗಳ ಪ್ರಮಾಣ ಹೆಚ್ಚಿಸಲು ಕ್ರಮ

6. ಸ್ಥಳೀಯ ವಿಮಾನ ಪ್ರಯಾಣಿಕರಿಗೂ ತಪಾಸಣೆ ಕಡ್ಡಾಯಗೊಳ್ಳಲು ತೀರ್ಮಾನ

7. ಎಲ್ಲಾ ಚುನಾವಣೆಗಳ ಮುಂದೂಡಿಕೆ

8. ಬಾಲಬ್ರೂಯಿ ಅತಿಥಿ ಗೃಹ ಕೊರೊನಾ ವಾರ್ ರೂಂ ಆಗಿ ಪರಿವರ್ತನೆ

9. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ಕಾರ್ಯಗಳು ನಡೆಯಲಿವೆ

10. ಎರಡು ತಿಂಗಳ ಪಡಿತರ ಒದಗಿಸಲು ಕ್ರಮ.

11. ಮುಂದಿನ 15 ದಿನ ನಗರದಿಂದ ಯಾರು ಹಳ್ಳಿಗಳಿಗೆ ಹೋಗದಂತೆ ಮುಖ್ಯಮಂತ್ರಿಗಳ ಮನವಿ

12. ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.