ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಕೊರೊನಾ ಸೋಂಕಿತ ಎಎಸ್ಐ ಸಾವು

Last Updated 28 ಜೂನ್ 2020, 7:04 IST
ಅಕ್ಷರ ಗಾತ್ರ

ಬೆಂಗಳೂರು: ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ನಗರದ ಠಾಣೆಯೊಂದರ ಎಎಸ್ಐಯೊಬ್ಬರು ಶನಿವಾರ ಮೃತಪಟ್ಟಿದ್ದು, ಅವರಿಗೆ ಕೊರೊನಾ ಸೋಂಕು ತಗುಲಿದ್ದು ಪರೀಕ್ಷೆಯಿಂದ ದೃಢಪಟ್ಟಿದೆ.

57 ವರ್ಷದ ಎಎಸ್ಐ, ವೈಟ್‌ಪೀಲ್ಡ್ ವಿಭಾಗದ ವ್ಯಾಪ್ತಿಯ ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪತ್ನಿ ಹಾಗೂ ಮಕ್ಕಳ‌ ಜೊತೆ ವಾಸವಿದ್ದರು.

ಶನಿವಾರ ರಾತ್ರಿ ಅವರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದರು. ಕುಟುಂಬಸ್ಥರೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು.

ಮೃತದೇಹದ ಗಂಟಲಿನ ದ್ರವವನ್ನು ಸಂಗ್ರಹಿಸಿದ ವೈದ್ಯರು, ಪರೀಕ್ಷೆಗೆ ಕಳುಹಿಸಿದ್ದರು. ಅದರ ವರದಿ ಪಾಸಿಟಿವ್ ಬಂದಿದೆ ಎಂಬುದಾಗಿ ವೈಟ್‌ಪೀಲ್ಡ್ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT