ಬೆಂಗಳೂರು: ಕೊರೊನಾದಿಂದಾಗಿ ಚುನಾವಣೆ ನಡೆಸಲು ಸಾಧ್ಯವಾಗದ ಕಾರಣ ಗ್ರಾಮ ಪಂಚಾಯಿತಿಗಳಿಗೆ ಮುಂದಿನ ಆರು ತಿಂಗಳ ಅವಧಿಗೆ ಆಡಳಿತ ಸಮಿತಿ ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ‘ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿದ್ದೇವೆ’ ಎಂದರು.

‘ಹಾಲಿ ಇರುವ ಸಮಿತಿಯನ್ನೇ ಮುಂದುವರಿಸಬೇಕೇ, ಆಡಳಿತಾಧಿಕಾರಿ ನೇಮಕ ಸೂಕ್ತವೇ ಅಥವಾ ಆಡಳಿತ ಸಮಿತಿ ನೇಮಿಸುವುದೇ ಎಂಬ ಮೂರು ಆಯ್ಕೆಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಅಂತಿಮವಾಗಿ ಆಡಳಿತ ಸಮಿತಿ ನೇಮಿಸಲು ಕಾನೂನುಬದ್ಧವಾಗಿ ಅವಕಾಶ ಇರುವುದರಿಂದ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದೂ ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ಗ್ರಾಮ ಪಂಚಾಯಿತಿಗಳ ಅವಧಿ ವಿಸ್ತರಿಸಿ: ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

‘ರಾಜ್ಯದ 6,018 ಗ್ರಾಮ ಪಂಚಾಯಿತಿಯಲ್ಲಿ 96 ಸಾವಿರ ಸದಸ್ಯರಿದ್ದಾರೆ. ಗ್ರಾಮ ಪಂಚಾಯಿತಿಗೆ ಸದಸ್ಯರಾಗಲು ಎಲ್ಲ ಅರ್ಹತೆ ಇರುವವರನ್ನು ಆಯಾ ಜಿಲ್ಲಾಧಿಕಾರಿಗಳು ಆಡಳಿತ ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಿದ್ದಾರೆ. ಈ ಸಮಿತಿ 6 ತಿಂಗಳವರೆಗೆ ಅಸ್ವಿತ್ವದಲ್ಲಿ ಇರಲಿದ್ದು, ಆರು ತಿಂಗಳು ಪೂರ್ಣಗೊಳ್ಳುವ ಮೊದಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ’ ಎಂದು ಅವರು ಹೇಳಿದರು.

‘ಆಡಳಿತ ಸಮಿತಿಗೆ ಅಧಿಕಾರಿಯೇ ಅಧ್ಯಕ್ಷರಾಗಿರುತ್ತಾರೆ. ರೋಸ್ಟರ್ ಪ್ರಕಾರವೇ ಸಮಿತಿ ಇರಲಿದೆ. ಈ ಸಮಿತಿಗೆ ಗ್ರೂಪ್ ‘ಎ’ ಅಥವಾ ಗ್ರೂಪ್ ‘ಬಿ’ ಶ್ರೇಣಿಯ ಅಧಿಕಾರಿಯನ್ನು ಅಧ್ಯಕ್ಷರಾಗಿ ನೇಮಿಸಿ, ಆರ್ಥಿಕ ಪ್ರತ್ಯೋಜನೆಯ ಅಧಿಕಾರ ನೀಡಲಾಗುತ್ತದೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ತೀರ್ಮಾನಗಳನ್ನು ಸಮಿತಿ ತೆಗೆದುಕೊಳ್ಳಲಿದೆ. ಸಮಿತಿಯ ಸಲಹೆಗಳನ್ನು ಕಾನೂನಡಿ ಅವಕಾಶವಿದೆಯೇ ಎಂದು ಪರಿಶೀಲಿಸಿ ಅನುಷ್ಠಾನಗೊಳಿಸಲು ಅಧಿಕಾರಿ ಒಪ್ಪಿಗೆ ನೀಡಲಿದ್ದಾರೆ’ ಎಂದೂ ಈಶ್ವರಪ್ಪ ವಿವರಿಸಿದರು.

ಕಾನೂನು ಇಲಾಖೆ ಕಾರ್ಯದರ್ಶಿ, ಅಡ್ವೊಕೇಟ್ ಜನರಲ್ ಅವರು ನೀಡಿದ ಅಭಿಪ್ರಾಯದಂತೆ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದೂ ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.